ಕಳ್ಳತನ ಪ್ರಕರಣ -ಮೂವರು ಆರೋಪಿಗಳ ಬಂಧನ, 4.08 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
Theft case - Three accused arrested, gold ornaments worth Rs 4.08 lakh seized
ಕಳ್ಳತನ ಪ್ರಕರಣ -ಮೂವರು ಆರೋಪಿಗಳ ಬಂಧನ, 4.08 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
ಬಳ್ಳಾರಿ:ಆ (06)ರಂದು ನಗರದಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, 4.08 ಲಕ್ಷ ರೂ., ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ವಿಜಯನಗರ ಮೂಲದ ಗೌತಮ್ ರಾಜ್, ಪೋತರಾಜ್, ಸದ್ದಾಂ ಬಂಧಿತರು. ರಾಯಚೂರು ’ಜಿಲ್ಲೆಯ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆ.4 ರಂದು ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 71.40 ಗ್ರಾಂ ತೂಕದ ಬಂಗಾರದ ಸರ, ಉಂಗುರ, ಕಿವಿಯೊಲೆಗಳು ಹಾಗೂ 440 ಗ್ರಾಂ ತೂಕದ ಬೆಳ್ಳಿಯ ತಟ್ಟೆಗಳು, ಬಟ್ಟಲುಗಳು ಸೇರಿ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಅದರ ಒಟ್ಟು ಮೌಲ್ಯ 4,08,040 ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬಳ್ಳಾರಿಯ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 