ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿದವರು ಉತ್ತಮ ಸ್ಥಾನದಲ್ಲಿ ಇರುತ್ತಾರೆ : ಡಿಸಿ
ಬಳ್ಳಾರಿ29: ಕನ್ನಡ ನಾಡು ನುಡಿ ಮತ್ತು ದೇಶದ ಅಭಿಮಾನ ಇದ್ದಾಗ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸಬಹುದು. ಮಾತೃ ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿದವರು ಉತ್ತಮ ಸ್ಥಾನದಲ್ಲಿ ಇರುತ್ತಾರೆ; ಇದಕ್ಕೆ ನಾನೇ ಸಾಕ್ಷಿ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಹೇಳಿದರು.
ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಶನಿವಾರರಂದು ಏರ್ಪಡಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕುವೆಂಪು ಅವರ ನಮ್ಮ ಹೆಮ್ಮೆಯ ರಾಷ್ಟ್ರಕವಿ. ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಆಚರಿಸುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದ ಅವರು, ಕುವೆಂಪು ಅವರ ಸಾಹಿತ್ಯದಲ್ಲಿ ಸಾಮಾಜಿಕ ಸಾಮರಸ್ಯ ಮತ್ತು ವಿಶ್ವ ಮಾನವ ಪರಿಕಲ್ಪನೆ ಅಂಶಗಳನ್ನು ಒಳಗೊಂಡಿದೆ ಎಂದರು.
ದೇಶ ಅಭಿವೃದ್ಧಿಯತ್ತ ಸಾಗಬೇಕಾದರೇ ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ತಮ್ಮ ಮಾತುಗಳಲ್ಲಿ ಪ್ರಸ್ತಾಪಿಸಿದ ಡಿಸಿ ರಾಮ್ ಪ್ರಸಾತ್ ಅವರು, ಮಕ್ಕಳಿಗೆ ಅದರಲ್ಲೂ ಹೆಣ್ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಅವರು ಮಾತನಾಡಿ, ಮಾತೃ ಭಾಷೆಯಲ್ಲಿ ವಿಧ್ಯಾಭ್ಯಾಸ ಮಾಡಿದರೇ ನೇರವಾಗಿ ಹೃದಯಕ್ಕೆ ತಲುಪತ್ತದೆ. ವಿದ್ಯಾಥರ್ಿಗಳು ಹೆಚ್ಚಿನ ಪುಸ್ತಕಗಳನ್ನು ಓದಬೇಕು. ಆ ಮೂಲಕ ಜ್ಞಾನವೃದ್ಧಿಸಿಕೊಳ್ಳಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಮ ಕಲ್ಮಠ ಮಾತನಾಡಿದರು.
ಸಕರ್ಾರಿ ಪ್ರಥಮ ದಜರ್ೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಸಿ.ಕೊಟ್ರಪ್ಪ ಅವರು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಬಿ.ನಾಗರಾಜ ಅವರು ಸ್ವಾಗತಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತ ಮಹಮ್ಮದ್ ಮುನೀರ್, ದೈಹಿಕ ಶಿಕ್ಷಣಾಧಿಕಾರಿ ರುದ್ರಮುನಿ ಸೇರಿದಂತೆ ಶಿಕ್ಷಕ-ಶಿಕ್ಷಕಿಯರು, ವಿದ್ಯಾಥರ್ಿಗಳು ಇತರರು ಇದ್ದರು.
ಮಂಜುನಾಥ ಗೋವಿಂದವಾಡ ಅವರಿಂದ ಕುವೆಂಪು ಅವರ ರೇಖಾ ಚಿತ್ರಗಳ ಪ್ರದರ್ಶನವನ್ನು ಮಾಡಲಾಯಿತು.