ಬರಗೂರ ಶಾಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮ
Tobacco-free youth campaign program at Baragur School
ಬರಗೂರ ಶಾಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮ
ಕೊಪ್ಪಳ 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಕೊಪ್ಪಳ ಮತ್ತು ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಬರಗೂರು ರವರ ಸಂಯುಕ್ತಾಶ್ರಯದಲ್ಲಿ ಬರಗೂರ ಶಾಲೆಯಲ್ಲಿ ಸೋಮವಾರದಂದು ತಂಬಾಕು ಮುಕ್ತ ಯುವ ಅಭಿಯಾನ 3.0 (ವಿಶೇಷ 60 ದಿನಗಳ ಅಭಿಯಾನ) ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಐಇಸಿ ಪ್ರಚಾರ ಹಾಗೂ ಶಾಲೆಯ ಶಿಕ್ಷಕರಿಗೆ, ಸಿಬ್ಬಂದಿಗೆ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ -2003 ರ ಬಗ್ಗೆ ಹಾಗೂ ತಂಬಾಕು ಸೇವನೆಯನ್ನು ತ್ಯಜಿಸಲು ಪೋಷಕರಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ಬಗ್ಗೆ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿ ಜಾಗೃತಿಯನ್ನು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದ ಸಂಗಪ್ಪ ಮಮಟಗೇರಿ, ಜಿಲ್ಲಾ ಸಲಹೆಗಾರರಾದ ಸರಸ್ವತಿ, ಶಾಲೆಯ ಮುಖ್ಯೋಪಾಧ್ಯಾಯರಾದ ಶಿರವಾರ ತಿಪ್ಪಣ್ಣ, ರಾಮಸ್ವಾಮಿ, ರಮೇಶ, ನಾಗರಾಜ್, ಶಿಕ್ಷಕರು, ಸಿಬ್ಬಂದಿ ವರ್ಗದವರು, ಸಮಾಜ ಕಾರ್ಯಕರ್ತರು ಮತ್ತು ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 