ಇಂದು ಭೀಮ ಅಭಿನಂಧನಾ ಕಾರ್ಯಕ್ರಮ
ಹಾವೇರಿ 19: ಬೆಳಗಾವಿಯಲ್ಲಿ ದಿ.14 ರಂದು ಜರುಗಿದ ಡಿಎಸ್ಎಸ್ ರಾಜ್ಯ ಮಟ್ಟದ ಬೃಹತ್ ಸಮಾವೇಶದ ಯಶಸ್ವಿಗಾಗಿ ಶ್ರಮಿಸಿದ ಒಡನಾಡಿಗಳಿಗೆ ಕ.ದ.ಸಂ.ಸಮಿತಿಯಿಂದ ದಿ.20 ರಂದು ಮಧ್ಯಾಹ್ನ 2 ಘಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮ ಸರ್ಕಲಿನ ಕನ್ನಡ ಸಾಹಿತ್ಯ ಭವನದಲ್ಲಿ ಭೀಮ ಅಭಿನಂಧನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಅಭಿನಂದನಾ ಭಾಷಣವನ್ನು ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ ಮಾಡುವರು.ರಾಜ್ಯ ಸಂಘಟನಾ ಸಂಚಾಲಕರಾದ ಮರೀಶ್ ಎಸ್ ನಾಗಣ್ಣವರ್ ಅಧ್ಯಕ್ಷತೆವಹಿಸಲಿದ್ದು, ಇತರ ರಾಜ್ಯ ಮುಖಂಡರು ಮುಖ್ಯ ಅಥಿತಿಗಳಾಗಿ ಆಗಮಿಸುವರು.ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಕ.ದ.ಸಂ.ಸಮಿತಿಯ ಪದಾಧಿಕಾರಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಡಿಎಸ್ಎಸ್ ರಾಜ್ಯ ಮುಖಂಡ ಉಡಚಪ್ಪ ಮಾಳಗಿ ಕೋರಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 