ವೇಣುಧ್ವನಿ 90.4 ಎಫ್. ಎಮ್‌ನಲ್ಲಿ ಪಿಸಿಓಡಿ ಕುರಿತು ಚರ್ಚೆ, ಪರಿಹಾರ
Tone 90.4 F. Discussion on PCOD in M, Remedy
ವೇಣುಧ್ವನಿ 90.4 ಎಫ್. ಎಮ್‌ನಲ್ಲಿ ಪಿಸಿಓಡಿ ಕುರಿತು ಚರ್ಚೆ, ಪರಿಹಾರ
ಬೆಳಗಾವಿ 17: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಪೋನ್-ಇನ್ ಕಾರ್ಯಕ್ರಮ ನಡೆಸಲಾಯಿತು. ಮಂಗಳವಾರ ದಿನಾಂಕ 17ನೇ ಡಿಸೆಂಬರ 2024 ರಂದು ಬೆಳಗ್ಗೆ 10 ರಿಂದ 11 ಗಂಟೆ ವರೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿಸಿಓಡಿ ಕಾರಣ, ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಮತ್ತು ಚಿಕಿತ್ಸೆ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಹಿತು. ಕಾರ್ಯಕ್ರಮದಲ್ಲಿ ಬೆಳಗಾವಿ ಕೆಎಲ್‌ಇ ಡಾ ಪ್ರಭಾಕರ ಕೋರೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಅಂಜಲಿ ಜೋಷಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪಿಸಿಓಡಿ ವಿಷಯ ಸಂಭಂದಿಸಿದ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 