ವಿದ್ಯುತ್ ತಂತಿ ತಗುಲಿ ಕಬ್ಬು ತುಂಬಿದ ಟ್ರ್ಯಾಕ್ಟರಗೆ ಬೆಂಕಿ
Tractor loaded with sugarcane catches fire after hitting an electric wire
ಜಮಖಂಡಿ 20: ನಗರದ ಚಂದ್ರಗಿರಿ ಪೇಠದ ಹತ್ತಿರ ಕಬ್ಬು ತುಂಬಿದ ಟ್ರ್ಯಾಕ್ಟರ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಜರುಗಿದೆ. ರಬಕವಿ- ಬನಹಟ್ಟಿ ತಾಲೂಕಿನ ರಬಕವಿಯ ಮಾದೇವ ಲಕ್ಷ್ಮಣ ಕುರಾಬಿ ಅವರ ಟ್ರ್ಯಾಕ್ಟರ ಚಾಲಕ ವಿಠ್ಠಲ ಯಂಕಪ್ಪ ಗಸ್ತಿ ಕಬ್ಬು ತುಂಬಿಕೊಂಡು ಸಿದ್ದಾಪೂರ ಸಕ್ಕರೆ ಕಾರ್ಖಾನೆಗೆ ಹೋಗುವ ಸಮಯದಲ್ಲಿ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದಿರುತ್ತದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳಾದ ಎ.ಎಸ್.ಒ. ನಿಂಗಪ್ಪ ಹೂಗಾರ, ಸಿಬ್ಬಂದಿಗಳಾದ ಮಾದೇವ ಹಳೇಗೌಡರ, ಟಿ.ವಾಯ್.ಭಂಡಾರಿ, ಎಸ್.ಎಸ್.ಭಜಂತ್ರಿ, ಕೆ.ಬಿ.ಮುಲ್ಲಾ, ಶ್ರೀಶೈಲ ಹಿರೇಮಠ ಸೇರಿ ಅಗ್ನಿಯನ್ನು ನಂದಿಸಲು ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಶಹರ ಪೋಲಿಸ್ ಠಾಣೆಯ ಸಿಬ್ಬಂದಿಗಳು ಸಹ ಇದ್ದರು ಎನ್ನಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 