ಪಾರದರ್ಶಕ ಆಡಳಿತ, ಗುಣಾತ್ಮಕ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕತೆ ಬೇಕು : ಎಚ್ ಡಿ ಕುಮಾರಸ್ವಾಸ್ವಾಮಿ
ಬೆಂಗಳೂರು, ಜೂ 11: ಪಾರದರ್ಶಕ ಆಡಳಿತ ನೀಡಲು ಹಾಗೂ ಗುಣಾತ್ಮಕ ಯೋಜನೆಗಳ ಅನುಷ್ಠಾನಕ್ಕೆ ತರಲು ಅಧಿಕಾರಿಗಳಲ್ಲಿ ಪ್ರಾಮಾಣಿಕತೆ ಅಗತ್ಯವಿದೆ.ಮೂವತ್ತು ವರ್ಷಗಳ ನಂತರ ಲೋಕೋಪಯೋಗಿ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳ ಸಭೆ ನಡೆಸಲಾಗಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಇಂಜಿನಿಯರ್ ಗಳ ಪಾತ್ರ ಮಹತ್ವದ್ದು, ಅವರು ತಮ್ಮ ಕಾರ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ವಿಧಾನ ಸೌಧದಲ್ಲಿ ನಡೆದ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ರಸ್ತೆ ಅಭಿವೃದ್ಧಿಗೆಂದು ಲೋಕೋಪಯೋಗಿ ಇಲಾಖೆಗೆ ಕಳೆದ ಎರಡು ಆಯವ್ಯಯದಲ್ಲಿ 21 ಸಾವಿರ ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಮುಂದಿನ 6-7 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಾಲಾಸಂಪರ್ಕ ಸೇತು ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1508 ಸೇತುವೆಗಳನ್ನು 187 .04 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 963 ಕಾಮಗಾರಿಗಳು ಪೂರ್ಣ ಗೊಂಡಿದ್ದು, ಉಳಿದ ಕಾಮಗಾರಿಗಳನ್ನು 2-3 ತಿಂಗಳಿನಲ್ಲಿ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶಾಲೆ- ಕಾಲೇಜುಗಳ ನವೀಕರಣಕ್ಕಾಗಿ 1200 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಶಾಲಾ ಕಾಲೇಜುಗಳ ನವೀಕರಣವನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವಂತೆ ಮುಖ್ಯಮಂತ್ರಿ ಸೂಚಿಸಿದರು. ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಅವೈಜ್ಞಾನಿಕತೆಗೆ ಅವಕಾಶ ನೀಡದೆ, ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಅನಗತ್ಯವಾಗಿ ಯೋಜನಾ ವೆಚ್ಚ ಅಧಿಕಗೊಳ್ಳುತ್ತದೆ. ಇದಕ್ಕೆ ಸಂಪೂರ್ಣ ಕಡಿವಾಣ ಹಾಕುವಂತೆ ಅಧಿಕಾರಿಗಳು ಕುಮಾರಸ್ವಾಮಿ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗೊಳಿಸಲು ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದ ಅವರು. ಈಗಾಗಲೇ ಮುಖ್ಯ ಕಾರ್ಯದಶರ್ಿಗಳು ಇದಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲಿಸಿದ್ದಾರೆ.
ಬೆಂಗಳೂರು- ಮೈಸೂರು ಕಾರಿಡಾರ್ ನ ಶೇ.90 ರಷ್ಟು ಭೂಸ್ವಾಧೀನ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆಲಸಗಳು ಪೂರ್ಣಗೊಂಡಿವೆ,ಈ ಕಾರ್ಯಕ್ಕೆ ಇರುವ ಅಡೆತಡೆಗಳನ್ನು ಶೀಘ್ರವಾಗಿ ನಿವಾರಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮಾತನಾಡಿ, ಯೋಜನೆಗಳ ಅಂದಾಜು ಪಟ್ಟಿ 100 ಕ್ಕೆ 100ರಷ್ಟು ಕರಾರುವಕ್ಕಾಗಿ ಇರಬೇಕು. ನಿಗದಿತ ದರಕ್ಕಿಂತ ಹೆಚ್ಚು ಅಥವಾ ಕಡಿಮೆ ಆಗುವುದನ್ನು ತಪ್ಪಿಸಬೇಕು. ರಸ್ತೆಗಳ ಸುಧಾರಣೆಯತ್ತ ಕಳೆದ 5 ವರ್ಷಗಳಲ್ಲಿ ಸುಮಾರು 49 ಸಾವಿರ ಕೋಟಿಗಳ ವೆಚ್ಚ ಮಾಡಲಾಗಿದೆ. ಮುಂದಿನ 5 ವರ್ಷಗಳಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗುತ್ತಿಗೆದಾರರು ಒಪ್ಪಂದದ ಪ್ರಕಾರ ಕೆಲಸ ನಿರ್ವಹಿಸದಿದ್ದಲ್ಲಿ ಅವರಿಗೆ ನೋಟೀಸು ನೀಡುವಂತೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ ಅವರು ಮಾತನಾಡಿ, ಒಟ್ಟು 6433 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದಜರ್ೆಗೇರಿಸಲು ತಾತ್ವಿಕ ಅನುಮೋದನೆಯಾಗಿದೆ. ಒಟ್ಟು 405 ಕಿ.ಮೀ. ಉದ್ದದ 4 ಹೊಸ ರಾಷ್ಟ್ರೀಯ ಹೆದ್ದಾರಿಗಳನ್ನು ಘೋಷಿಸಲಾಗಿದೆ ಎಂದು ವಿವರಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 