ಟೆಕ್ಸಿರಿ ಸೊಲ್ಯೂಶನ್ಸ್ ವತಿಯಿಂದ ನಿಡೋಣಿಯಲ್ಲಿ ವೃಕ್ಷಾರೋಪಣಾ ಕಾರ್ಯಕ್ರಮ
Tree plantation program in Nidoni by Teksiri Solutions
ವಿಜಯಪುರ 07 : ವಿಶ್ವ ಪರಿಸರ ದಿನದ ಅಂಗವಾಗಿ ಟೆಕ್ಸಿರಿ ಸೊಲ್ಯೂಶನ್ಸ್ ವತಿಯಿಂದ ನಿಡೋಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೃಕ್ಷಾರೋಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಟೆಕ್ಸಿರಿ ಸೊಲ್ಯೂಶನ್ಸ್ನ ನಿರ್ದೇಶಕರು ಆದ ಮುತ್ತಣ್ಣ ಹಾಗು ಆಶಾ ಸರಶೆಟ್ಟಿ ಮತ್ತು ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟರು.
ಮರಗಳನ್ನು ಬೆಳೆಸುವುದು ಹಾಗೂ ಪರಿಸರದ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬ ಅಭಿಪ್ರಾಯ ಈ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.ಬಬಲೇಶ್ವರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜುಬೇರ್ ಎಸ್. ಪಠಾಣ್, ಕೀಟಶಾಸ್ತ್ರಜ್ಞರು ಮತ್ತು ನಿಡೋಣಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳಾದ ಶಿವರಾಜ್ ಗಣಾಚಾರಿ, ಅರ್ಜುಣಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಬಬಲೇಶ್ವರ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಭಾರತಿ ಹಿರೇಮಠ, ನಿಡೋಣಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಎಚ್. ಮುಜಾವರ್, ನಿವೃತ್ತ ಯೋಧರ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಮುಚ್ಚಂಡಿ ಅವರು ಭಾಗವಹಿಸಿ ವೃಕ್ಷಾರೋಪಣೆಯ ಮಹತ್ವದ ಕುರಿತು ಮಾತನಾಡಿದರು.
ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಕನಿಷ್ಠ ಒಂದು ಮರವನ್ನು ನೆಟ್ಟು ಅದರ ಪೋಷಣೆ ಮಾಡಬೇಕು ಎಂದು ಕರೆ ನೀಡಲಾಯಿತು.ಕಾರ್ಯಕ್ರಮದ ನೇತೃತ್ವ ಹಾಗೂ ಸಮನ್ವಯವನ್ನು ವೀರೇಶ ಬಿರಾದಾರ ವಹಿಸಿಕೊಂಡಿದ್ದರು. ಟೆಕ್ಸಿರಿ ಸೊಲ್ಯೂಶನ್ಸ್ನ ಸಿಬ್ಬಂದಿಗಳಾದ ಸಂತೋಷ್ ಅಂಗಡಿ, ಸಚಿನ್ ರಾಯ್ಕರ್, ವಿಶ್ವನಾಥ್, ವಿಜಯ್, ಸೌರಭ್, ನವೀನ್, ಚೇತನ್, ಓಂಪ್ರಕಾಶ್, ವಾಸವಿ, ಶ್ರೀಲತಾ, ಶಿವಾನಿ, ಅಂಜಲಿ, ವೀಣಾ,ಪೂಜಾ, ಗೊಲ್ಲಾಳ ಹಾಗೂ ಸ್ಥಳೀಯರು ಭಾಗವಹಿಸಿ ವೃಕ್ಷಾರೋಪಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು ಸಸಿಗಳನ್ನು ನೆಡುವುದರ ಜೊತೆಗೆ ಅವುಗಳ ಪೋಷಣೆ ಮತ್ತು ಸಂರಕ್ಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಸಂಕಲ್ಪ ಮಾಡಿದರು. ಟೆಕ್ಸಿರಿ ಸೊಲ್ಯೂಶನ್ಸ್ ಸಿಬ್ಬಂದಿಗಳ ಈ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 