ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ
Tribute to senior newspaper distributors
ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ
ಗದಗ 07 : ತಾಲೂಕಿನ ನರಸಾಪೂರ ಗ್ರಾಮದ ಜಗದ್ಗುರು ಮುಂಡರಗಿ ಅನ್ನದಾನೇಶ್ವರ ಶಾಖಾ ಮಠದಲ್ಲಿ ಗದಗ ಜಿಲ್ಲಾ ಪತ್ರಿಕಾ ವಿತರಕರ ಸಂಘದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಜರುಗಿತು.
ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಣೆಯಲ್ಲಿ ತೊಡಗಿಕೊಂಡಿರುವ ಸಂಘದ ಹಿರಿಯರಾದ ಕಲ್ಲಯ್ಯ ಎಸ್. ಹಿರೇಮಠ ಹಾಗೂ ಗಂಗಾಧರ ಮಡ್ಡಿ ಅವರನ್ನು ಸನ್ಮಾನಿಸಲಾಯಿತು.
ಮುಂಡರಗಿ ಅನ್ನದಾನೇಶ್ವರ ಶಾಖಾ ಮಠದ ವೀರೇಶ್ವರ ಸ್ವಾಮೀಜಿ, ಬನ್ನಿಕೊಪ್ಪ ಬ್ರಹನ್ಮಠ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ, ಜಿಗೆರಿ-ವೆಂಕಾಟಾಪುರದ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದ್ರಿಮೋತಿ, ಜಿಲ್ಲಾ ಅಧ್ಯಕ್ಷ ವೀರಬಸಯ್ಯ ವೀರಕ್ತಮಠ, ಸಂಘದ ಶಂಕರಗುರು ಕಂದಗಲ್ಲ, ಸಿದ್ದರಾಮೇಶ್ವರ ಮಡಿವಾಳರ, ಕಿರಣ ಮದ್ಲಿ, ಕರಿಯಪ್ಪ ಗಾಣಿಗೇರ, ಮಂಜುನಾಥ ಕಬನೂರ ಹಾಗೂ ಸಂಘದ ಸರ್ವ ಪದಾಧಿಕಾರಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 