ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನಿವಾಸದ ಹೊರಗೆ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ
ವಾಷಿಂಗ್ಟನ್, ಮಾರ್ಚ್ 18 :ಅಮೆರಿಕದ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಅವರ ಅಧಿಕೃತ ನಿವಾಸದ ಹೊರಗೆ ಶಸ್ತ್ರಸಜ್ಜಿತ ವ್ಯಕ್ತಿಯನ್ನು ಕಾನೂನು ಜಾರಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ . ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆಯ ಪ್ರಕಾರ, ಉಪಾಧ್ಯಕ್ಷರ ನಿವಾಸ ಇರುವ ನೌಕಾ ವೀಕ್ಷಣಾಲಯದ ಬಳಿ ಅನುಮಾನಾಸ್ಪದ ವ್ಯಕ್ತಿಯ ವರದಿಗೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ. ಗುಪ್ತಚರ ಮಾಹಿತಿ ಆಧರಿಸಿ ಶಂಕಿತನನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಂಧಿತನನ್ನು ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊ ನಿವಾಸಿ ಪಾಲ್ ಮುರ್ರೆ ಎಂದು ಗುರುತಿಸಲಾಗಿದೆ ಶಂಕಿತನನ್ನು ಈ ಮೊದಲು ವಿವಿಧ ಪ್ರಕಣಗಳಿಗೆ ಸಂಬಂಧಿಸಿದಂತೆ ಅಮೆರಿಕ ಸೀಕ್ರೆಟ್ ಸರ್ವಿಸ್ ಬಂಧಿಸಲಾಗಿತ್ತು ಎಂದು ಹೇಳಲಾಗಿದೆ. ರೈಫಲ್ ಮತ್ತು ಮದ್ದುಗುಂಡುಗಳನ್ನು ಸಹ ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.