ನಂದಿಕುರಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಅಡುಗೆ ಸಿಬ್ಬಂದಿಗೆ ಸಮವಸ್ತ್ರ ಹಾಗೂ ವಿದ್ಯಾರ್ಥಿಗಳಿಗೆ ಶೂ ವಿತರಿಣೆ
Uniforms distributed to the kitchen staff and shoes to the students of the Government High School i
ರಾಯಬಾಗ 24 : ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಬುಧವಾರ ತಾಲೂಕಿನ ನಂದಿಕುರಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಅಡುಗೆ ಸಿಬ್ಬಂದಿಗೆ ಸಮವಸ್ತ್ರ ಹಾಗೂ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆಯಬೇಕು. ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಸೌಕರ್ಯ ಕಲ್ಪಿಸಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರೆ್ಡ ಮಾಡಬೇಕೆಂದರು.ಗ್ರಾ.ಪಂ.ಉಪಾಧ್ಯಕ್ಷ ಅಮೀತ ಜಾಧವ, ಪಿಡಿಒ ಸುರೇಶ ಮೇಖಳಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಶ್ರೀಕಾಂತ ಸಂಗೋಟೆ, ಮುಖ್ಯೋಪಾಧ್ಯಾಯ ಪಿ.ಆರ್.ಸಮಾಜೆ, ಶ್ರಿಮಂತ ದತ್ತವಾಡೆ, ಕೃಷ್ಣಾ ದತ್ತವಾಡೆ, ಶ್ರಾವಣ ಕಾಂಬಳೆ, ಸುನೀಲ ಬಿದ್ರೆ, ಜಾಂಬು ಸಾವಂತ, ಅಣ್ಣಪ್ಪ ಸಂಗೋಟೆ, ರಾಮಾ ಸಂಗೋಟೆ ,ದಸ್ತಗೀರ ಮುಲ್ತಾನಿ, ಎಸ್.ಬಿ.ತಾವಶಿ, ಡಿ.ಡಿ.ನದಾಫ, ಎ.ಎಸ್.ಧನಗರ, ವ್ಹಿ.ಡಿ. ಪಾಟೀಲ, ಎಸ್.ಬಿ.ನಾಯಿಕ, ಎಸ್.ಎಸ್. ಪೋಳ, ಎಸ್.ಆರ್.ನಾಯಿಕ, ಜ್ಞಾನೇಶ್ವರ ಕಾಂಬಳೆ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 