ಮುದ್ದೆಬಿಹಾಲ್

ಮುದ್ದೇಬಿಹಾಳ ಬಂದ್‌’ಗೆ ಸಾರ್ವಜನಿಕರ ಅಭೂತಪೂರ್ವ ಬೆಂಬಲಶಾಲೆ-ಕಾಲೇಜು ಎಂದಿನಂತೆ ಕಾರ್ಯನಿರ್ವಹಣೆ

ಮುದ್ದೇಬಿಹಾಳ ಬಂದ್‌’ಗೆ ಸಾರ್ವಜನಿಕರ ಅಭೂತಪೂರ್ವ ಬೆಂಬಲಶಾಲೆ-ಕಾಲೇಜು ಎಂದಿನಂತೆ ಕಾರ್ಯನಿರ್ವಹಣೆ

ಮುದ್ದೇಬಿಹಾಳ ಬಂದ್‌’ಗೆ ಸಾರ್ವಜನಿಕರ ಅಭೂತಪೂರ್ವ ಬೆಂಬಲಶಾಲೆ-ಕಾಲೇಜು ಎಂದಿನಂತೆ ಕಾರ್ಯನಿರ್ವಹಣೆ

ಮುದ್ದೇಬಿಹಾಳ, 31 : ಸರ್ವೊ?ಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ. ಆರ್ . ಗವಾಯಿ ಮೇಲೆ ಶೂ ಎಸೆದ ಪ್ರಕರಣ ಹಾಗೂ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಮತ್ತು ಚಾಮರಾಜನಗರ ಜಿಲ್ಲೆಯ ಜ್ಯೋತಿಗೌಡನಪೂರ ಗ್ರಾಮದಲ್ಲಿ ಗೌತಮ ಬುದ್ಧ ಹಾಗೂ ಅಂಬೇಡ್ಕರ್ ರವರ ಪುತಳೀಯನ್ನು ಧ್ವಂಸ ಮಾಡಿದನ್ನು ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟ ಹಾಗೂ ತಾಲೂಕಿನ ವಿವಿಧ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. 

     ಮಧ್ಯಾಹ್ನ 3 ಗಂಟೆಗೆ ಪ್ರತಿಭಟನಾಕಾರರು ತಾಲೂಕಿನ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ತೆರಳಿ ಡಾ.ಬಿ ಆರ್ ಅಂಬೇಡ್ಕರ್ ಅವರಿಗೆ ಮಾಲಾಪರ್ಣೆ ಸಲ್ಲಿಸಿ ತಹಶಿಲ್ದಾರ ಕೀರ್ತಿ ಚಾಲಕ್ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದಲ್ಲಿ ಬೆಳಿಗ್ಗೆಯಿಂದ ಸಂಜೆ 5 ಗಂಟೆ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳು ನೂರಕ್ಕೆ ನೂರರಷ್ಟು ಬಂದ್ ಮಾಡಿ ಮುದ್ದೇಬಿಹಾಳ ಬಂದ್‌’ಗೆ ಬೆಂಬಲ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದಲ್ಲಿ ಕೂಲಿ ಕಾರ್ಮಿಕರು ತಮ್ಮ ದೈನಿಂದಿನ ಕೆಲಸಕ್ಕಾಗಿ ಬಂದಿದ್ದರಿಂದ ಸ್ವಲ್ಪ ಪ್ರಮಾಣದಲ್ಲಿ ಬೆಳಿಗ್ಗೆ ಜನದಟ್ಟಣೆ ಕಂಡು ಬಂದಿತು. ಶಾಲೆ-ಕಾಲೇಜು ಎಂದಿನಂತೆ ಆರಂಭ ಗೊಂಡಿದ್ದರಿಂದ ವಿದ್ಯಾರ್ಥಿಗಳು ಮುಂಜಾನೆ ವೇಳೆಯಲ್ಲಿ ಪರದಾಡಬೇಕಾದ ಸನ್ನಿವೇಶಗಳು ಎದುರಾದವು. ಸರಕಾರಿ, ಖಾಸಗಿ ಶಾಲೆ, ಕಾಲೇಜುಗಳು ಕೆಲವೊತ್ತು ತೆಗೆದು ಮುಚ್ಚಿದರೆ. ಪೆಟ್ರೊ?ಲ್ ಬಂಕ್ , ಓಷಧ ಅಂಗಡಿ, ಆಸ್ಪತ್ರೆ, ಬ್ಯಾಂಕ್ ವ್ಯವಹಾರ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು. ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿಲ್ಲ. ಮನವಿ ಸಲ್ಲಿಸಿದ ನಂತರ ಸಂಜೆ 5 ಗಂಟೆಗೆ ಬಸ್ ಗಳ ಓಡಾಟ ಆರಂಭಗೊಳಿಸಲಾಯಿತು.ಇಂದಿರಾ ಸರ್ಕಲ್, ಅಂಬೇಡ್ಕರ್ ಸರ್ಕಲ್, ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚೆನ್ನಮ್ಮ ವೃತ್ತ, ದ್ಯಾಮವ್ವಣ ಕಟ್ಟೆ, ಬಜಾರ ರಸ್ತೆ ಯಲ್ಲಿ ಬೆಳಿಗ್ಗೆಯಿಂದ ಸಂಜೆ 4 ಗಂಟೆವರೆಗೂ ಯಾವುದೇ ಅಂಗಡಿಗಳನ್ನು ತೆಗೆಯದೇ ಮುದ್ದೇಬಿಹಾಳ ಬಂದ್ ಗೆ ಬೆಂಬಲವನ್ನು ಸೂಚಿರುವುದು ಸ್ವಯಂ ಪ್ರೇರಣೆಯಿಂದ ಅನುಕರಣೆ ಮೆರೆದರು.

     ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಎಂಬಾತ ಶೂ ಎಸೆದು ಕಾನೂನಿಗೆ ಅಗೌರವ ತೋರಿದ್ದ. ಈ ಮೂಲಕ ಆತ ಮನೋವಾದಿತನವನ್ನು ಪ್ರದರ್ಶಿಸಿದ್ದಾನೆ. ತಾಲೂಕಿನ ಬನೋಶಿ ಗ್ರಾಮದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ದಲಿತ ಮುಖಂಡ ಹರೀಶ್ ನಾಟಿಕರ್ ಒತ್ತಾಯಿಸಿದರು.ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಕಳೆದರು ದಲಿತರ ಮೇಲಿನ ದೌರ್ಜನ್ಯ, ಅತ್ಯಾಚಾರ ನಿಂತಿಲ್ಲ. ಇದಕ್ಕೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಬಾಲಕಿ ಪ್ರಕರಣವೇ ಸಾಕ್ಷಿಯಾಗಿದೆ. ಕೃತ್ಯವೆಸಗಿದ ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರಿಗೆ ಸಾರ್ವಜನಿಕವಾಗಿ ಗಲ್ಲು ಶಿಕ್ಷೆ ವಿಧಿಸಿ ಎಚ್ಚರಿಕೆಯ ಸಂದೇಶ ನೀಡಬೇಕು ಎಂದು ಸಿ.ಜಿ ವಿಜಯಕರ್ ಆಗ್ರಹಿಸಿದರು.ಈ ಸಂದರ್ಭದಲ್ಲಿ ದಲಿತ ಮುಖಂಡರುಗಳಾದ ಪ್ರಕಾಶ ಚಲವಾದಿ ಸರೂರ, ತಾಲೂಕು ವಾಲ್ಮೀಕಿ ಸಂಘಟದ ಅಧ್ಯಕ್ಷ ಬಲಭೀಮ ನಾಯಕಮಕ್ಕಳ, ಪರಶುರಾಮ ಮುರಾಳ, ಆನಂದ್ ಮುದೂರ, ಸಂಗಮೇಶ್ ಚಲವಾದಿ ನೇಬಗೇರ, ಆನಂದ ದೇವೂರ, ರೇವಣಸಿದ್ದಪ್ಪ ನಾಯಕ್, ಸಿದ್ದಪ್ಪ ಚಲವಾದಿ ಬಿದರಕುಂದಿ, ಗುಂಡಪ್ಪ ಚಲವಾದಿ, ಮಂಜುನಾಥ ಕಟ್ಟಿಮನಿ, ಯಮನಪ್ಪ ಚಲವಾದಿ, ಎಮ್‌.ಆರ್ ಕುಂಟೋಜಿ, ಮೈಬೂಬ ನಾಲತವಾಡ, ಮುತ್ತು ಚಲವಾದಿ, ರೇವಣೆಪ್ಪ ಚಲವಾದಿ, ಪ್ರಕಾಶ ಕಾಳೆ, ಯಮನಪ್ಪ ವಡ್ಡರ, ಭೀಮಣ್ಣ ದಾಸರ, ಗಿರಿಯಪ್ಪ ತಳವಾರ, ಬಹದ್ದೂರ್ ರಾಠೋಡ, ಮಾನವ ಬಂಧುತ್ವ ತಾಲೂಕು ಸಂಚಾಲಕರು ಎಸ್ ಎಂ ನೆರಬೆಂಚಿ ಸೇರಿದಂತೆ ಹಲವರಿದ್ದರು. 

ಕರೆ ಸ್ವೀಕರಿಸದ ತಹಶಿಲ್ದಾರ ಕೀರ್ತಿ ಚಾಲಕ್*ಮುದ್ದೇಬಿಹಾಳ ಬಂದ್ ಗೆ ಬಗ್ಗೆ ತಹಶಿಲ್ದಾರರನ್ನು ಸಂಪರ್ಕಿಸಿದರೆ ಕರೆ ಸ್ವೀಕರಿಸದೇ ಶಾಲಾ-ಕಾಲೇಜುಗಳ ರಜೆ ಬಗ್ಗೆ ಪ್ರತಿಕ್ರಿಯೆ ನೀಡದೆ ಕೈ ತೊಳೆದುಕೊಂಡರು. ಶಾಲಾ ಕಾಲೇಜು ಬಗ್ಗೆ ಬಿಇಒ ಬಿ ಎಸ್ ಸಾವಳಗಿ ಅವರಿಗೆ ಸಂಪರ್ಕಿಸಿದಾಗ ಶಾಲಾ-ಕಾಲೇಜು ರಜೆ ನೀಡಲು ನಮಗೆ ಯಾವುದೇ ಅನುಮತಿ ಇರುವುದಿಲ್ಲ. ಹೀಗಾಗಿ ತಾಲೂಕಿಗೆ ಅಂತಿಮ ತಹಶಿಲ್ದಾರರೇ ಶಾಲೆಗಳಿಗೆ ರಜೆ ನೀಡಲು ತಹಶಿಲ್ದಾರರು ಜವಬ್ದಾರರು. ಈಗಾಗಲೇ ಮುದ್ದೇಬಿಹಾಳ ಬಂದ್ ಬಗ್ಗೆ ಶಿಕ್ಷಣ ಇಲಾಖೆಯಿಂದ ತಹಶಿಲ್ದಾರರಿಗೆ ಪತ್ರ ಬರೆದು ಈ ಬಗ್ಗೆ ಮಾಹಿತಿ ನೀಡಲಾಗಿದೆ. ತಹಶಿಲ್ದಾರರಿಂದ ಶಾಲಾ ಬಂದ್ ಬಗ್ಗೆ ನಮಗೆ ಯಾವುದೇ ಪ್ರತಿಕ್ರಿಯೇ ಬಂದಿಲ್ಲ. ಹೀಗಾಗಿ ಶಾಲೆಗಳು ಎಂದಿನಂತೆ ಆರಂಭ ಇವೆ. 


ಸುದ್ದಿ ಓದಿ