ಕಾರವಾರ

ಮಕ್ಕಳ ರಕ್ಷಣಾ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಮಾದರಿ; ಡಾ.ತಿಪ್ಪೇಸ್ವಾಮಿ ಕೆ.ಟಿ

ಮಕ್ಕಳ ರಕ್ಷಣಾ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಮಾದರಿ; ಡಾ.ತಿಪ್ಪೇಸ್ವಾಮಿ ಕೆ.ಟಿ
Uttara Kannada district is a model in the state in the implementation of child protection; Dr. Thip

 ಕಾರವಾರ 28: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಮಾದರಿಯಾಗಿದೆ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.  

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ರ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಮಕ್ಕಳ ರಕ್ಷಣಾ ನೀತಿ-2016 ಅನುಷ್ಠಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಕಲಿಕೆಯ ಜೊತೆ ಮಕ್ಕಳ ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸಬೇಕು. ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದರು.  

 ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009 ಅಡಿಯಲ್ಲಿ ಮಕ್ಕಳ ಶಿಕ್ಷಣ ಸಮಸ್ಯೆಯ ಕುರಿತು ಆರಿ​‍್ಟ.ಇ ದೂರು ಪ್ರಾಧಿಕಾರ ರಚಿಸಿ, ದೂರು ಯಾರಿಗೆ ನೀಡಬೇಕು ಎಂಬುದರ ಕುರಿತು ದೂರು ಪ್ರಾಧಿಕಾರದ ಮುಖ್ಯಸ್ಥರ ಪದನಾಮ, ದೂರವಾಣಿ ಸಂಖ್ಯೆಯುಳ್ಳ ಮಾಹಿತಿ ಫಲಕವನ್ನು ಎಲ್ಲಾ ಶಾಲೆಯ ಹಾಗೂ ವಿಶೇಷವಾಗಿ ಅನುದಾನ ರಹಿತಿ ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಯಲ್ಲಿ ಅಳವಡಿಸಬೇಕು ಇದರ ಜತೆಗೆ ಮಕ್ಕಳ ರಕ್ಷಣಾ ನೀತಿ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆಯ ಪದನಾಮ ಹಾಗೂ ದೂರವಾಣಿ ಸಂಖ್ಯೆ ಹಾಗೂ ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಫಲಕ ಕಡ್ಡಾಯವಾಗಿ ಪ್ರದರ್ಶಿಸಿಸಬೇಕು ಇದರ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದರು.  

ಶಾಲೆ ಬಿಟ್ಟ ಮಕ್ಕಳು ಮಕ್ಕಳು ಯಾವ ಕಾರಣಕ್ಕೆ ಶಾಲೆ ಬಿಟ್ಟಿದ್ದಾರೆ ಎಂಬದುರ ಕುರಿತು ನಿರ್ದಿಷ್ಟ ಕಾರಣ ಗುರುತಿಸಿ ರಚನಾತ್ಮಕ ಪರಿಹಾರ ನೀಡಬೇಕು. ಶಾಲೆ ಬಿಟ್ಟ ಮಕ್ಕಳ ತಾಲೂಕು ವಾರು ಮತ್ತು ಪಂಚಾಯತಿವಾರು ಪಟ್ಟಿ ತಯಾರಿಸಿ ಪ್ರತಿ 3 ತಿಂಗಳಿಗೊಮ್ಮೆ ನಡೆಯುವ ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.   

ಪಂಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಗಳಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯಿದ್ದು, ಈ ಸಮಿತಿಯಲ್ಲಿ ಮುಖ್ಯೋಪಾಧ್ಯಾಯರು ಸದಸ್ಯರಾಗಿದ್ದು, ಪ್ರತಿ 3 ತಿಂಗಳಿಗೊಮ್ಮೆ ಸಭೆಯು ಕಡ್ಡಾಯವಾಗಿ ನಡೆಯಬೇಕು ಈ ಬಗ್ಗೆ ಶಿಕ್ಷಣ ಇಲಾಖೆ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು. ಪಂಚಾಯತ ರಾಜ್ ಮತ್ತು ನಗರ ಸ್ಥಳಿಯ ಸಂಸ್ಥೆಯ ಅಧಿಕಾರಿಗಳಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.  

ತರೆದ ಮನೆ ಕಾರ್ಯಕ್ರಮವನ್ನು ಪ್ರತಿ ಗುರುವಾರ 40 ಮಕ್ಕಳ ಪೊಲೀಸ್ ಠಾಣೆಗೆ ಕರೆತಂದು, ಪೊಲೀಸ್ ಮತ್ತು ಕಾನೂನು ವ್ಯವಸ್ಥೆಯ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಗುಣಮಟ್ಟದ ಆಹಾರ ಒದಗಿಸುವಂತೆ ತಿಳಿಸಿದರು.  

ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಪೊಲೀಸ್ ವೆರಿಫಿಕೇಶನ್ ಕಡ್ಡಾಯವಾಗಿ ಮಾಡಬೇಕು. ಅನಧಿಕೃತವಾಗಿ ಕೋಚಿಂಗ್ ಸೆಂಟರ್ಗಳಿದ್ದರೆ ನೋಟಿಸ್ ನೀಡಬೇಕು ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಚಿಂಗ್ ಸೆಂಟರ್ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದರು  

ಮಿಷನ್ ವಾತ್ಸಲ್ಯ ಯೋಜನೆ ಅಡಿಯಲ್ಲಿ ಸಂಕಷ್ಟದಲ್ಲಿರುವ ಪ್ರತಿ ಮಗುವಿಗೆ ಪ್ರತಿ ಮಾಹೆ ರೂ.4000 ಆರ್ಥಿಕ ನೆರವು ನೀಡಲು ಅವಕಾಶವಿದ್ದು, ಜೈವಿಕ ಪೋಷಕರಿಂದ ಬೇರ​‍್ಪಟಟ ಮಕ್ಕಳ ಹಾಗೂ ಏಕ ಪೋಷಕರ ಮಕ್ಕಳ ಸಮೀಕ್ಷೆ ಮಾಡಿ, ವರದಿ ನೀಡುವಂತೆ ತಿಳಿಸಿದರು.   

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ, ಶಾಲಾ ಮತ್ತು ಸಾಕ್ಷತರಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಲತಾ ನಾಯಕ, ಡಿ.ಆರ್‌. ನಾಯ್ಕ, ಡಯಟ್ ಪ್ರಿನ್ಸಿಪಾಲ್ ಎನ್‌. ಆರ್ ಹೆಗಡೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು, ಕುಮಾರ, ಕೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ