ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ: ಹಳಕಟ್ಟಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ: ಹಳಕಟ್ಟಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ Vachana Literature Preservation Day: Adopt Halakatti's ideals in your life

 ಗದಗ 02: ವಚನ ಸಾಹಿತ್ಯದ ಸಂರಕ್ಷಣೆಗಾಗಿ ತಮ್ಮ ಇಡೀ ಜೀವನವನ್ನು ಸಮರ​‍್ಿಸಿದ ’ವಚನ ಪಿತಾಮಹ’ ಡಾ. ಫ.ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ’ವಚನ ಸಾಹಿತ್ಯ ಸಂರಕ್ಷಣಾ ್ತು್ಣೂಸ್ಘ್ಪಾಹಿ2026' ಆಚರಿಸಲಾಯಿತು.  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್‌.ವಿ. ಸಂಕನೂರು, ವಚನ ಸಾಹಿತ್ಯ ಸಂರಕ್ಷಣೆಗೆ ಹಳಕಟ್ಟಿ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅವರ ಆದರ್ಶಗಳು ಹಾಗೂ ವಚನಗಳ ಸಂದೇಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.  

12ನೇ ಶತಮಾನದಲ್ಲಿ ಶರಣರು ತಾಳೆಗರಿ ಮತ್ತು ಓಲೆಗರಿಗಳಲ್ಲಿ ಬರೆದಿದ್ದ ವಚನಗಳನ್ನು ಕಡುಬಡತನದಲ್ಲಿಯೂ ಊರೂರು ಸುತ್ತಿ ಸಂಗ್ರಹಿಸಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ. ವಕೀಲಿ ವೃತ್ತಿಯನ್ನು ತೊರೆದು ಸೈಕಲ್ನಲ್ಲಿ ಹಳ್ಳಿಗಳಿಗೆ ತೆರಳಿ ಸಾವಿರಾರು ವಚನಗಳನ್ನು ಸಂಗ್ರಹಿಸಿ, ಮುದ್ರಣಕ್ಕಾಗಿ ಸ್ವಂತ ಮುದ್ರಣಾಲಯ ಸ್ಥಾಪಿಸಿದ ಅವರ ಸೇವೆ ಅಮೋಘವಾಗಿದೆ ಎಂದು ಅವರು ಸ್ಮರಿಸಿದರು.  ಹಳಕಟ್ಟಿಯವರು ಸಾಹಿತ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತರಾಗದೆ, ವಿಜಯಪುರದಲ್ಲಿ ಬಿಎಲ್ಡಿಇ ಶಿಕ್ಷಣ ಸಂಸ್ಥೆ, ಸಿದ್ದೇಶ್ವರ ಬ್ಯಾಂಕ್ ಸೇರಿದಂತೆ ಹಲವು ಶಿಕ್ಷಣ ಮತ್ತು ಸಹಕಾರಿ ಸಂಸ್ಥೆಗಳ ಸ್ಥಾಪನೆಯ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.  

ಯುವಜನರು ವಚನಗಳನ್ನು ಕೇವಲ ಓದುವುದಲ್ಲ, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶರಣರ "ಕಳಬೇಡ, ಕೊಲಬೇಡ, ಮುನಿಯಬೇಡ..." ಎಂಬ ಸಂದೇಶವನ್ನು ಪಾಲಿಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂಕನೂರು ಹೇಳಿದರು.  ವಚನಗಳ ಉಳಿವಿಗೆ ಹಳಕಟ್ಟಿ ಅವರ ತ್ಯಾಗ ಅನನ್ಯ: ಮುಖ್ಯ ಅತಿಥಿಯಾಗಿ ಮಾತನಾಡಿದ ಶರಣ ತತ್ವ ಚಿಂತಕ ಅಶೋಕ ಬರಗುಂಡಿ, ಡಾ. ಫ.ಗು. ಹಳಕಟ್ಟಿ ಅವರು ವೈಯಕ್ತಿಕ ಸುಖ-ಸೌಕರ್ಯಗಳನ್ನು ತ್ಯಜಿಸಿ ವಚನ ಸಾಹಿತ್ಯದ ಉಳಿವಿಗಾಗಿ ಬದುಕನ್ನೇ ಮುಡಿಪಾಗಿಟ್ಟ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು. ಸ್ಪರ್ಧಾ ವಿಜೇತರಿಗೆ ಸನ್ಮಾನ: ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಿ ಸನ್ಮಾನಿಸಲಾಯಿತು.  

ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್‌., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ, ಶರಣ ಸಾಹಿತ್ಯ ಚಿಂತಕ ಬಳಿಗಾರ, ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಶಂಕರಣ್ಣ ಸಂಕಣ್ಣನವರ, ಎಸ್‌.ಎನ್‌. ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.