ಬಹುಮುಖ ಪ್ರತಿಭೆ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ
Versatile talent Anupriya Raghavendra Kulkarni selected for Bala Gaurav Award
ವಿಜಯಪುರ 14: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಶೈಕ್ಷಣಿಕ, ವಿಜ್ಞಾನ, ಸಂಶೋಧನೆ, ಕ್ರೀಡೆ ಮತ್ತು ರಸಪ್ರಶ್ನೆಗಳಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾಳೆ. ಅವಳು ಯಾವಾಗಲೂ ತರಗತಿಯ ಟಾಪರ್ ಆಗಿದ್ದು, ಚೆಸ್, ಕಲೆ, ಪ್ರಬಂಧ, ಸಾಹಿತ್ಯ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾಳೆ. ವಿದ್ಯಾರ್ಥಿನಿಗೆ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ. ಆರ್. ನಾಯರ, ಹಿರಿಯ ಸಂಯೋಜಕಿ ದೀಪಾ ಜಂಬುರೆ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಧನ್ಯವಾದಗಳು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 