ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರು ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
ಗದಗ 30 : ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ಹಾಗೂ 2024 ರ ವಾರ್ಷಿಕ ಪ್ರಶಸ್ತಿಗಳನ್ನು ಗುರುವಾರ ಘೋಷಿಸಲಾಗಿದೆ.
ನಗರದ ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರ ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಜೀವಮಾನ ಸಾಧನೆಗಾಗಿ 2023 ರ ಸಾಲಿನ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಮತ್ತು ನಗರದಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ಸಿದ್ದಯ್ಯ ಹಿರೇಮಠ ಹಾಗೂ ಪ್ರಕಾಶ ಶೇಠ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭದ ದಿನಾಂಕ ಸದ್ಯದಲ್ಲಿಯೇ ಪ್ರಕಟಿಸಲಾಗುವದು ಎಂದು ಮಧ್ಯಮ ಅಕಾಡೆಮಿಯ ಅಧ್ಯಕ್ಷ ಅಯೇಷಾ ಕಾನುಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.