ಲೋಕದರ್ಶನ ವರದಿ
ವಿಜಯಪುರ 11: ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ, ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾಥರ್ಿ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿ ವಿಭಾಗೀಯ ಸಂಚಾಲಕ ಸಚೀನ್ ಕುಳಗೇರಿ ಮಾತನಾಡಿ, ಅನೇಕ ಸಮಸ್ಯೆಗಳಿಂದ ಕೂಡಿರುವ ವಿವಿಗಳಲ್ಲಿ ಇಂದು ಶೈಕ್ಷಣಿಕ ಗುಣಮಟ್ಟ ದಿನೇ ದಿನೇ ಕುಸಿಯುತ್ತಿರುವುದು ಆತಂಕದ ವಿಷಯ. ಸರ್ಕಾರ ತನ್ನದೇ ನಾಟಕದಲ್ಲಿ ಶಿಕ್ಷಣ ಕ್ಷೇತ್ರವನ್ನುಸಂಪೂರ್ಣವಾಗಿ ಕಡೆಗಣಿಸುತ್ತಿರುವುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಜಿಲ್ಲಾ ಸಂಚಾಲಕ ಬಸವರಾಜ ಪೂಜಾರಿ ಮಾತನಾಡಿ, ಉನ್ನತ ಗುಣಮಟ್ಟದ ಶಿಕ್ಷಣ ಮತ್ತು ಜ್ಞಾನ ಸರ್ವರಿಗೂ ಸಿಗುವಂತಾಗಲಿ ಎಂದು ಮಹಾನ್ ಉದ್ದೇಶದಿಂದ ರಾಜ್ಯದಲ್ಲಿ ಅನೇಕ ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಲಾಗಿದೆ, ಆದರೆ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ನೇಮಕಾತಿಯೇ ಆಗದೇ ಇಂದು ಹಲವಾರು ವಿಶ್ವವಿದ್ಯಾಲಯಗಳು ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುತ್ತಿರುವುದು ಶೋಚನಿಯ ಸಂಗತಿ ಎಂದರು. ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳ ನೇಮಕವಾಗದಿರುವುದು ಹಾಗೂ ಪ್ರಸ್ತುತಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ 6 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ನಡೆಯದೇ ಇರುವುದು ನೋವಿನ ಸಂಗತಿ ಎಂದರು. ಈ ಎಲ್ಲ ವಿಶ್ವವಿದ್ಯಾಲಯಗಳ ಅವ್ಯವಸ್ಥೆ ರಾಜ್ಯ ಸರ್ಕಾರಕೆ ್ಉನ್ನತ ಶಿಕ್ಷಣದ ಬಗ್ಗೆ ಇರುವ ನಿರ್ಲಕ್ಷಕ್ಕೆ ಕೈಗನ್ನಡಿಯಂತಿದೆ. ಉನ್ನತ ಶಿಕ್ಷಣದ ಉಳಿವಿಗಾಗಿ ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಗಳ ಎಲ್ಲಾ ಹುದ್ದೆಗಳ ನೇಮಕಾತಿ ಮಾಡಬೇಕು. ಅಷ್ಟೆ ಅಲ್ಲದೇರಾಜ್ಯ 412 ಪ್ರಥಮದಜರ್ೆ ಕಾಲೇಜುಗಳಿದ್ದು, ಇದರ ಪೈಕಿ ಬಹುತೇಕ ಕಾಲೇಜುಗಳಲ್ಲಿ ಗ್ರೇಡ್-01 ಪ್ರಾಂಶುಪಾಲರ ಹುದ್ದೆಗಳು ಮಂಜೂರಾಗಿದ್ದೂ, ಕಾರ್ಯನಿರ್ವಹಿಸುತ್ತಿರುವವರ ಸಂಖ್ಯೆಕಡಿಮೆಇನ್ನೂ ಅನೇಕ ಹುದ್ದೆಗಳು ಖಾಲಿ ಉಳಿದಿದ್ದು, ತಕ್ಷಣ ಈ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಎಬಿವಿಪಿ ಕಾರ್ಯಕರ್ತರು ಒತ್ತಾಯಿಸಿದರು.
ರಾಜ್ಯ ಕಾರ್ಯಕಾರಣೆ ಸದಸ್ಯ ಪಾಂಡು ಮೋರೆ ಮಾತನಾಡಿ, ಉನ್ನತ ಶಿಕ್ಷಣದ ಕೇಂದ್ರಗಳಾಗಬೇಕಾದ ವಿಶ್ವವಿದ್ಯಾಲಯಗಳು ಇಂದು ಭ್ರಷ್ಟಚಾರದ ಕೇಂದ್ರಗಳಾಗುತ್ತಿವೆ. ಕಟ್ಟಡಕಾಮಗಾರಿಯ ಹೆಸರಿನಲ್ಲಿ, ಪ್ರಯೋಗಾಲಯಗಳ ಅಭಿವೃದ್ಧಿಯ ಹೆಸರಿನಲ್ಲಿ, ಉಪಕರಣಗಳ ಖರಿದಿಯಲ್ಲಿ, ಅಂಕಪಟ್ಟಿಅವ್ಯವಹಾರ, ಸಿಬ್ಬಂದಿಗಳ ನೇಮಕಾತಿಯಲ್ಲಿ ಹಾಗೂ ಮುಂತಾದವುಗಳ ನೆಪದಲ್ಲಿರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಅವ್ಯವಹಾರದಲ್ಲಿತೊಡಗಿವೆ ಎಂದು ಆರೋಪಿಸಿದರು.
ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಬ್ರಹ್ನಾನಂದ, ವಿನೋದ ಮಣ್ಣೋಡ್ಡರ, ಶ್ರೀಧರ, ಸೋಮನಾಥ ಕುಂಬಾರ, ಮಹಾಂತೇಶ ಲಗಳಿ, ನಿಂಗಣ್ಣ ಮನಗೂಳಿ, ಶಿಲ್ಪಾ, ಬಸಮ್ಮಾ, ಸಂಧ್ಯಾ, ಸಾನಿಯಾ, ಸಚೀನ್, ಪ್ರಮೋದ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.