ಪಂಚ ಕಾಯಕಗಳ ಮೂಲಕ ಸಮಾಜ ನಿರ್ಮಾಣಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಎಸ್.ವಿ. ಸಂಕನೂರ
ಗದಗ 17: ವಿಶ್ವಕರ್ಮ ಸಮುದಾಯದವರು ದೈವದತ್ತವಾಗಿ ಪಂಚ ವಿದ್ಯೆಗಳನ್ನು ಕರಗತ ಮಾಡಿಕೊಂಡು, ದೇಶದ ಕಲೆ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಸೆಪ್ಟೆಂಬರ್ 17 ರಂದು ಆಯೋಜಿಸಿದ್ದ ವಿಶ್ವಕರ್ಮ ಹ್ಖದಿ್ತಿ2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಡಗಿತನ, ಕಮ್ಮಾರಿಕೆ, ಶಿಲ್ಪಕಲೆ ಸೇರಿದಂತೆ ವಿವಿಧ ಕಲೆಗಳಲ್ಲಿ ವಿಶ್ವಕರ್ಮ ಸಮುದಾಯದವರು ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ದೇವತೆಗಳ ಅರಮನೆ, ಪಾಂಡವರ ಅರಗಿನ ಮನೆ ಹಾಗೂ ದೇಶದ ಅನೇಕ ಭವ್ಯ ದೇವಾಲಯಗಳ ನಿರ್ಮಾಣ ಮತ್ತು ಶಿಲ್ಪಕಲೆಯಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಸ್ಮರಣೀಯವಾಗಿದೆ ಎಂದರು.ಸಮುದಾಯದ ಬಹುತೇಕ ಕುಟುಂಬಗಳು ಆರ್ಥಿಕವಾಗಿ ಮಧ್ಯಮ ಹಾಗೂ ಕೆಳವರ್ಗದಲ್ಲಿದ್ದು, ಮಕ್ಕಳ ಭವಿಷ್ಯ ಉಜ್ವಲವಾಗಬೇಕಾದರೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂಕನೂರ ಕರೆ ನೀಡಿದರು.