ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ : ಪೂರ್ವಸಿದ್ಧತಾ ಸಭೆ
Vishwakarma Amarashilpi Jakanachari Commemoration Day: Preparatory meeting
ಗದಗ 23: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.
ಜನೆವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರ ಅನುಮತಿ ಪಡೆದು ಸಮುದಾಯದ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಗೆ ಕ್ರಮ ವಹಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದ ಅಧ್ಯಕ್ಷರು, ಪ್ರಮುಖರು, ಹಿರಿಯರು, ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 