ಗ್ರಾಮೀಣ ಭಾಗದಲ್ಲಿ ಸರ್ಕಾರಿ ವೈದ್ಯ ಕಾಲೇಜು ಸ್ಥಾಪನೆಗೆ ಧ್ವನಿ: ಮೆಚ್ಚುಗೆ
Vote for establishment of government medical college in rural areas: Appreciation
ಆಲಮೇಲ 14: ವಿಜಯಪುರ ನಗರದಲ್ಲಿ ಸುಮಾರು ದಿನಗಳಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆಯುತ್ತಿರುವ ಹೋರಾಟದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ ನಡೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಪ.ಪಂ ಅಧ್ಯಕ್ಷ ಸಾದೀಕ ಸುಂಬಡ ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
ಈ ಭಾಗದಲ್ಲಿ ಹೆಚ್ಚು ಬಡ ವಿದ್ಯಾರ್ಥಿಗಳಿದ್ದಾರೆ. ಅವರ ಅನುಕೂಲಕ್ಕೆ ಜಿಲ್ಲೆಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎನ್ನುವ ಕೂಗು ಬಹು ದಿನಗಳಿಂದ ಕೂಡಿದೆ. ವಿಜಯಪುರ ನಗರದಲ್ಲಿ ಬಿಟ್ಟು ಬೇರೆ ತಾಲೂಕು ಕೇಂದ್ರಗಳಾದ ಸಿಂದಗಿ - ಇಂಡಿ ಅಥವಾ ಸಿಂದಗಿ ದೇವರ ಹಿಪ್ಪರಗಿ ಮಧ್ಯ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸರ್ಕಾರ ದಿಟ್ಟ ಹೆಜ್ಜೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಹಾಗೂ ಸಿಂದಗಿ ಇಂಡಿ ತಾಲೂಕಿಲ್ಲಿ ಬಹುತೇಕ ಕಬ್ಬು ಬೆಳೆಗಾರರು ಹೆಚ್ಚಿದ್ದು ಆ ರೈತರ ಜಮೀನುಗಳಿಗೆ ಸೂಕ್ತ ದಾರಿ ಇಲ್ಲ, ಆದಷ್ಟು ಬೇಗನೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರರ ಹೋರಾಟದ ಧ್ವನಿಯಾಗಿ ಶಾಸಕ ಅಶೋಕ ಮನಗೂಳಿ ಸದನದಲ್ಲಿ ವ್ಯಾಖ್ಯಾನಿಸಿದ್ದು ಶ್ಲಾಘನೀಯವಾಗಿದೆ ಎಂದು ಪ.ಪಂ. ಅಧ್ಯಕ್ಷ, ಆಲಮೇಲ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಸಾದೀಕ ಸುಂಬಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 