ಸಂಡೂರಿನ ಮತದಾರರು ತಕ್ಕಪಾಠ ಕಲಿಸುವ ವಿಶ್ವಾಸವಿದೆ: ಬೈರತಿ ಬಸವರಾಜ್
ಸಂಡೂರಿನ ಮತದಾರರು ತಕ್ಕಪಾಠ ಕಲಿಸುವ ವಿಶ್ವಾಸವಿದೆ: ಬೈರತಿ ಬಸವರಾಜ್
ಬಳ್ಳಾರಿ 29: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ತುಕಾರಾಂ ಅವರು ಗೆಲ್ಲುತ್ತಾ ಬಂದಿದ್ದಾರೆ. ಆದರೆ ಕ್ಷೇತ್ರ ಮಾತ್ರ ಅಭಿವೃದ್ಧಿ ಆಗಿಲ್ಲ ಈಗಾಗಲೇ ಅವರು ಸಂಸದರು. ಈಗ ಅವರ ಪತ್ನಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ ಸಂಡೂರಿನ ಜನ ಈ ಸಾರಿ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ವಿಶ್ವಾಸವಿದೆ ಎಂದು ಬಿಜೆಪಿ ಧುರೀಣ ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿದರು.
ನಗರದ ಸಂಗನಕಲ್ಲು ರಸ್ತೆಯ ವಾಜಪೇಯಿ ಬಡಾವಣೆಯಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಏರಿ್ಡಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಭಾರಿಸುವ ವಿಶ್ವಾಸವಿದೆ. ರಾಜ್ಯದಲ್ಲಿ ಸುಳ್ಳು ಗ್ಯಾರಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿಿ ತೊಡಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ರಾಜ್ಯದ ಜನರ ಹಣವನ್ನು ಲೂಟಿ ಮಾಡಲು ನಿಂತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದಲ್ಲಿ ಲೋಕಸಭಾ ಚುನಾವಣೆ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ತುಕಾರಾಂ ಅವರಿಗೂ ಸುಮಾರು ಕೋಟಿ ರೂ. ಪಾಲು ತಲುಪಿದೆ ಇಂತಹ ಭ್ರಷ್ಟಾಚಾ ರಿಗಳಿಗೆ ಈ ಸಾರಿ ಸಂಡೂರಿನ ಮತದಾರರು ತಕ್ಕಪಾಠ ಕಲಿಸುವ ವಿಶ್ವಾಸವಿದೆ ಎಂದರು. ಬಿಜೆಪಿಯಲ್ಲಿ ಯಾವುದೇ ಮುನಿಸು ಅಸಮಾಧಾನ ಗೊಂದಲಗಳಿಲ್ಲ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. ಚುನಾವಣೆಯು ಈಗ ಕಾವು ಪಡೆಯುತ್ತಿದೆ. ನ.2ರಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರು ಪ್ರಚಾರಕ್ಕೆ ಬರುತ್ತಾರೆ ಎಲ್ಲಾ ನಾಯಕರು ಸೇರಿ ಸಂಡೂರಿನ ಪ್ರತಿ ಮನೆ ಮನೆಗೂ ಕಾಂಗ್ರೆಸ್ನ ಭ್ರಷ್ಟಾಚಾರ, ಲೂಟಿಯಕುರಿತು ಮತದಾರರಿಗೆ ಮನವರಿಕೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.