ಮತದಾರರು ನೋಂದಣಿ ಕರಡು ಮತದಾರರ ಪಟ್ಟಿ ಪ್ರಕಟ: ಡಿಸಿ ಪ್ರಸಾತ್
ಬಳ್ಳಾರಿ,ನ.10: 2019ರ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಬಳ್ಳಾರಿ ಲೋಕಸಭಾ ಚುನಾವಣೆಗೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಕ್ಷೇಪಣೆಗಳನ್ನು 2018ರ ಡಿ.20ರವರೆಗೆ ಸಲ್ಲಿಸಬಹುದಾಗಿದೆ ಎಂದು ಡಿಸಿ ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ 1915556 ಮತದಾರರು ನೋಂದಣಿ ಮಾಡಿಕೊಳ್ಳಲಾಗಿದ್ದು, 1911614 ಮತದಾರರು ಭಾವಚಿತ್ರದೊಂದಿಗೆ ನೋಂದಣಿ ಮಾಡಲಾಗಿದೆ ಎಂದು ವಿವರಿಸಿದ ಡಿಸಿ ರಾಮ್ ಪ್ರಸಾತ್ ಅವರು, ಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ 182552 ಮತದಾರರು, ಹಗರಿಬೊಮ್ಮನಹಳ್ಳಿಯಲ್ಲಿ 221503, ವಿಜಯನಗರ-228923, ಕಂಪ್ಲಿ-213350, ಸಿರಗುಪ್ಪ-202836, ಬಳ್ಳಾರಿ ಗ್ರಾಮೀಣ-219226, ಬಳ್ಳಾರಿ ನಗರ-233295, ಸಂಡೂರು-215178 ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ 198693 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಬೇರೆಡೆ ಸ್ಥಳಾಂತರ, ತಿದ್ದುಪಡಿ ಅವಕಾಶ ಮಾಡಿಕೊಡಲಾಗಿದ್ದು, ಸಾರ್ವಜನಿಕರು ಸದ್ಭಳಕೆ ಮಾಡಿಕೊಳ್ಳಬೇಕು.
2019 ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು ಎಂದರು. ಪ್ರತಿ ಬೂತ್ಲೆವಲ್ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಫಾರಂ 6,7,8 ಮತ್ತು 8ಎ ಅಜರ್ಿಗಳನ್ನು ಸ್ವೀಕರಿಸಲಿದ್ದಾರೆ ಎಂದರು. ಹೆಸರು ಸೇರ್ಪಡೆ, ಸ್ಥಳಾಂತರ,ತಿದ್ದುಪಡಿ ಕುರಿತು ಏನೇ ಸಮಸ್ಯೆಗಳಿದ್ದರೇ ಜಿಲ್ಲಾಮಟ್ಟದ ಸಹಾಯವಾಣಿ 1077 ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿ ತಮ್ಮ ಸಮಸ್ಯೆಗಳು ಬಗೆಹರಿಸಿಕೊಳ್ಳಬಹುದಾಗಿದೆ.
ನಾಡ ಕಚೇರಿಗಳಲ್ಲಿಯೂ ಅಜರ್ಿಗಳನ್ನು ಸ್ವೀಕರಿಸುವ ನಿಟ್ಟಿನಲ್ಲಿ ಸೂಚನೆ ನೀಡಲಾಗುವುದು ಎಂದರು. ಡಿ.20ರವರೆಗೆ ಈಗಾಗಲೇ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ವ್ಯಕ್ತಪಡಿಸಬಹುದಾಗಿದ್ದು, ಡಿ.31ರೊಳಗೆ ಅವುಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು 2019 ಜ.15ರಂದು ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದರು. ಯುವ ಮತದಾರರ ನೋಂದಣಿಗೆ ವಿಶೇಷ ಗಮನ: ವಿಧಾನಸಭಾ ಚುನಾವಣೆಯ ಮಿಂಚಿನ ನೋಂದಣಿ ಅಭಿಯಾನದ ಸಂದರ್ಭದಲ್ಲಿ ನಮ್ಮ ಜಿಲ್ಲೆಯಲ್ಲಿಯೇ ಅತಿಹೆಚ್ಚು ಮತದಾರರನ್ನು ನೋಂದಣಿ ಮಾಡಲಾಗಿತ್ತು ಎಂಬ ಮಾಹಿತಿಯನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಡಿಸಿ ರಾಮ್ ಪ್ರಸಾತ್ ಅವರು, ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ವಿಶೇಷ ಗಮನಹರಿಸಿ ಕ್ರಮವಹಿಸಲಾಗುವುದು ಎಂದರು. ಪಿಯುಸಿ ಪಾಸ್ ಮಾಡಿ ಆಗಷ್ಟೇ 18 ವರ್ಷ ಪೂರ್ಣಗೊಳಿಸಿ ಪದವಿ, ವೃತ್ತಿಪರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಥರ್ಿಗಳನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವುದಕ್ಕೆ ಕ್ರಮಕೈಗೊಳ್ಳಲಾಗುವುದು.
ಆ ಕಾಲೇಜುಗಳಲ್ಲಿ ಒಬ್ಬ ಸಹಾಯಕ ಪ್ರಾಧ್ಯಾಪಕರನ್ನು ಮತದಾರರ ನೋಂದಣಿ ಅಧಿಕಾರಿಗಳು ಅಂತ ನೇಮಕ ಮಾಡಲಾಗುವುದು ಮತ್ತು ನೋಂದಣಿಯಾದ ಯುವಕರಲ್ಲೊಬ್ಬರನ್ನು ಯುವಮತದಾರರ ರಾಯಬಾರಿಯನ್ನಾಗಿ ನೇಮಕ ಮಾಡಲಾಗುವುದು ಎಂದು ವಿವರಿಸಿದ ಅವರು, ಇವರು ಮತದಾರರ ಪಟ್ಟಿಯಲ್ಲಿ ಯುವಕರ ಹೆಸರನ್ನು ಸೇರಿಸುವ ಕೆಲಸ ಮಾಡಲಿದ್ದಾರೆ ಮತ್ತು ಮತದಾನದ ಮಹತ್ವ ತಿಳಿಸಲಿದ್ದಾರೆ ಎಂದರು.
ವಸತಿ ನಿಲಯಗಳಲ್ಲಿನ 18 ವರ್ಷ ಪೂರ್ಣಗೊಳಿಸಿದ ವಿದ್ಯಾಥರ್ಿಗಳನ್ನು ಬಿಸಿಎಂ ಮೇಲ್ವಿಚಾರಕರ ಮೂಲಕ ಮತದಾರರ ಪಟ್ಟಿಯಲ್ಲಿ ಸೇರಿಸಲು ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.