ಮತದಾನದ ಅರಿವು ಮೂಡಿಸುವ ಜಾಗೃತಿ ಜಾಥಾ
ಲೋಕದರ್ಶನ ವರದಿ
ಮುಂಡಗೋಡ 11: ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉತ್ತರ ಕನ್ನಡ, ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ ಮತ್ತು ತಾಲೂಕು ಆಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಮತದಾನದ ಅರಿವು ಮೂಡಿಸುವ ಜಾಗೃತಿ ಜಾಥಾ ನಡೆಸಲಾಯಿತು.
ಪಟ್ಟಣದ ಪರಿವೀಕ್ಷಣಾ ಮಂದಿರದಿಂದ ಆರಂಭವಾದ ಜಾಥಾಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ ಕಟ್ಟಿ ಚಾಲನೆ ನೀಡಿದರು. ಶಿರಸಿ-ಹುಬ್ಬಳ್ಳಿ ರಸ್ತೆಯಿಂದ ಹೊರಟ ಜಾಥಾ ಮಧ್ಯೆ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಫೀಕ್ ಸಾಬ್ ಮೀರಾನಾಯಕ, ಸಿಪಿಐ ಸಿದ್ದಪ್ಪ ಸಿಮಾನಿ, ಪ್ರಭಾರ ಸಿಡಿಪಿಒ ದೀಪಾ ಬಂಗೇರ, ಪಿಎಸ್ಐ ಯಲ್ಲಾಲಿಂಗ ಕುನ್ನೂರ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದ ಸದಸ್ಯರು, ವಿಕಲಚೇತನ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.