ರಾಷ್ಟ್ರ ರಾಜಧಾನಿಯಲ್ಲಿ ದಟ್ಟ ಮಂಜು
ನವದೆಹಲಿ, ಜ 04 :ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಶೀತ ಹವಾಮಾನದೊಂದಿಗೆ ದಟ್ಟ ಮಂಜು ಆವರಿಸಿತ್ತು. ಕನಿಷ್ಠ ತಾಪಮಾನವು 11.4 ಡಿಗ್ರಿ ಸೆಲ್ಸಿಯಸ್ ನಷ್ಟಿತ್ತು. ಬೆಳಗ್ಗೆ ಹತ್ತು ಗಂಟೆಯ ವೇಳೆಗೆ ತಾಪಮಾನವು 13.6 ಡಿಗ್ರಿ ಸೆಲ್ಸಿಯಸ್ ಆಗಿತ್ತು. ದಿನದ ತಾಪಮಾನವು 18 ಡಿಗ್ರಿ ಸೆಲ್ಸಿಯಸ್ ನಷ್ಟಿರಲಿದೆ ಮತ್ತು ಸಂಜೆಯ ಕಡೆಗೆ ಇಳಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಗೋಚರಿಸದೆ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸಿದರು ಹಾಗೂ ಸಂಚಾರವು ನಿಧಾನಗತಿಯಲ್ಲಿ ಸಾಗಿತ್ತು. ಕಳೆದ 24 ಗಂಟೆಗಳಲ್ಲಿ ಸಫ್ದರ್ಜಂಗ್ ಕೇಂದ್ರದಲ್ಲಿ 14.8 ಮಿ.ಮೀ, ಪಾಲಂ ಕೇಂದ್ರದಲ್ಲಿ 5.3 ಮಿ.ಮೀ, ಲೋದಿ ರಸ್ತೆ 18.6 ಮಿ.ಮೀ ಮತ್ತು ಅಯನಗರ 15.2 ಮಿ.ಮೀ ಮಳೆಯಾಗಿತ್ತು. ಸೋಮವಾರ ಬೆಳಿಗ್ಗೆ ಸೂಚ್ಯಂಕ ಗಾಳಿಯ ಗುಣಮಟ್ಟ ಸುಧಾರಿಸಿದ್ದು, ಹಗಲಿನಲ್ಲಿ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.ಮಂಗಳವಾರವೂ ಸಹ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ಲಘು ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ.