ಜನರಿಗೆ ಉತ್ತಮ ಸ್ಪಂದನೆ ನೀಡಿ, ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ಹಾಗೂ ವೇಗ ಕಾಪಾಡಬೇಕು ಹಿ ಡಾ. ಶೈಲೇಂದ್ರ ಬೆಲ್ದಾಳ

ಜನರಿಗೆ ಉತ್ತಮ ಸ್ಪಂದನೆ ನೀಡಿ, ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ಹಾಗೂ ವೇಗ ಕಾಪಾಡಬೇಕು ಹಿ ಡಾ. ಶೈಲೇಂದ್ರ ಬೆಲ್ದಾಳ
We should respond well to the people and maintain transparency and speed in public service. Dr. Sha

                 ಬೀದರ್ 31 : ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ, ಸಾರ್ವಜನಿಕ ಸೇವೆಗಳು ಸುಲಭವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಲಭ್ಯವಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಬೀದರ್ ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ  ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ  ಚರ್ಚೆ ನಡೆಸಿ ಅವರು ಮಾತನಾಡಿದರು.

                ಸಭೆಯಲ್ಲಿ ಕಂದಾಯ ಇಲಾಖೆಯ ಭೂಮಿ ಸಂಬಂಧಿತ ಸೇವೆಗಳಾದ ಭೂ ದಾಖಲೆಗಳ ನಿರ್ವಹಣೆ, ಭೂ ವಿವಾದಗಳ ಪರಿಹಾರ, ವಿಪತ್ತು ನಿರ್ವಹಣೆ, ಪಿಂಚಣಿ ಯೋಜನೆಗಳು (ವೃದ್ಧಾಪ್ಯ, ವಿಧವಾ, ಅಂಗವಿಕಲ), ಸಾಮಾಜಿಕ ಭದ್ರತಾ ಯೋಜನೆಗಳು, ಸಂಧ್ಯಾ ಸುರಕ್ಷಾ, ಅಂತ್ಯ ಸಂಸ್ಕಾರ ಸಹಾಯಧನ, ರೈತ ಕುಟುಂಬಗಳಿಗೆ ನೆರವು, ಸೇರಿದಂತೆ ವಿವಿಧ ವಿಪತ್ತು ಪರಿಹಾರ, ಪಡಿತರ ಚೀಟಿ ವಿತರಣೆ ಹಾಗೂ ಜಾತಿ ಪ್ರಮಾಣ ಪತ್ರ ನೀಡುವಂತಹ ಹಲವಾರು ವಿಷಯಗಳ ಕುರಿತು ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಶೀಘ್ರ ಬಗೆಹರಿಸಬೇಕು ಎಂದು ಶಾಸಕರು ಸೂಚಿಸಿದರು.

               ಜನರಿಗೆ ಉತ್ತಮ ಸ್ಪಂದನೆ ನೀಡಿ, ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ಹಾಗೂ ವೇಗ ಕಾಪಾಡಬೇಕು ಸಾರ್ವಜನಿಕರ ಸಮಸ್ಯೆಗಳಿಗೆ ಯಾವುದೇ ವಿಳಂಬವಿಲ್ಲದೆ ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಪರಿಹಾರ ಒದಗಿಸಿ - ಡಾ. ಶೈಲೇಂದ್ರ ಬೆಲ್ದಾಳೆ.ಈ ಸಂದರ್ಭದಲ್ಲಿ ಬೀದರ್ ತಹಶೀಲ್ದಾರ್ ರವಿಕುಮಾರ ದಾಮಾ, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.  ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ, ಸಹಾಯಕ ನಾಗೇಶ್ ಸಿದ್ದಾ. 


ಸುದ್ದಿ ಓದಿ