ಬ್ಯಾಡ್ಗಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

ಬ್ಯಾಡಗಿ: ಪ್ರಸಕ್ತ 2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳಾದ ಹಸಿಮೆಣಸಿನಕಾಯಿ, ಅಡಿಕೆ, ಶುಂಠಿ ಮತ್ತು ಮಾವು ಬೆಳೆಗಳಿಗೆ ವಿಮೆ ತುಂಬಲು ಜುಲೈ 31 ಕೊನೆಯ ದಿನಾಂಕವಾಗಿದ್ದು,  ತಾಲೂಕಿನ ಬ್ಯಾಡಗಿ ಹಾಗೂ ಕಾಗಿನೆಲೆ ಹೋಬಳಿಯ ರೈತರು ಬೆಳೆವಿಮೆಗೆ ಅರ್ಜಿ ಸಲ್ಲಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅಶೋಕ ಕುರುಬರ ತಿಳಿಸಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ತಾಲೂಕಿನ ಬ್ಯಾಡಗಿ ಹಾಗೂ ಕಾಗಿನೆಲೆ ಹೋಬಳಿಯ ರೈತರು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಸಂಬಂಧಪಟ್ಟಂತೆ ಹಸಿ ಮೆಣಸಿನಕಾಯಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 3550 ರೂ, ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್'ಗೆ 6400 ರೂ, ಶುಂಠಿ ಬೆಳೆಗೆ ಪ್ರತಿ ಹೆಕ್ಟೇರ್'ಗೆ 6500 ರೂ ಮತ್ತು ಮಾವು ಬೆಳೆಗೆ ಪ್ರತಿ ಹೆಕ್ಟೇರ್'ಗೆ 4000 ರೂಗಳಂತೆ ತಮ್ಮ ವಿಮೆ ಕಂತಿನ ಮೊತ್ತವನ್ನು ಸಾಲ ಪಡೆದ ಮತ್ತು ಸಾಲ ಪಡೆಯದ ರೈತರು ಜುಲೈ 31ರೊಳಗಾಗಿ ಪಾವತಿಸಬೇಕು. ಈ ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಹತ್ತಿರದ ಬ್ಯಾಂಕುಗಳಿಗೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಪಹಣಿ, ಆಧಾರ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಹಾಗೂ ಸ್ವಯಂ ಘೋಷಿತ ಬೆಳೆ ಪ್ರಮಾಣ ಪತ್ರದೊಂದಿಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ಬೆಳೆ ವಿಮೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್ ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಸುದ್ದಿ ಓದಿ