ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರರಿದ್ದಾರೆ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
Which party is Satyaharishchandra in? Rajanna batting for BJP MLA
ಬೆಂಗಳೂರು/ ದೆಹಲಿ : ರಾಜಕೀಯ ಪಕ್ಷಭೇದಗಳನ್ನು
"ುರಿಯೇ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮಾಜಿ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು, ಇದೀಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಪರವಾಗಿ ಮಾತನಾಡಿದ್ದು, ಅವರ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜಣ್ಣ ಅವರು, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ ಹೇಳಿ ನೋಡೋಣ. ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ. ಇವನ್ಯಾರೋ ಬಡಪಾು ಸಿಕ್ಕಿ ಹಾಕಿಕೊಂಡಿದ್ದಾನೆ ಅಷ್ಟೇ ಎಂದು ಸಮರ್ಥಿಸಿಕೊಂಡರು. ಈ
"ಂದೆ ರಾಜಣ್ಣ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರಂಭಿಸಿದ 'ವೋಟ್ ಚೋರಿ' ಅಭಿಯಾನವನ್ನು
ಪರೋಕ್ಷವಾಗಿ ಟೀಕಿಸಿದ್ದರು.
2024ರ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದಾಗ ಮತಗಳ್ಳತನವನ್ನೇಕೆ ತಡೆಯಲಾಗಲಿಲ್ಲ ಎಂದು ಪ್ರಶ್ನಿಸಿದ್ದರು. ಇದು ಪಕ್ಷಕ್ಕೆ ಅಸಮಾಧಾವನ್ನುಂಟು ಮಾಡಿತ್ತು. ಈ "ನ್ನೆಲೆಯಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಸೂಚನೆಯ ಮೇರೆಗೆ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕಾುತು.
ಈ ನಡುವೆ ಸಚಿವ ಸ್ಥಾನದಿಂದ ಹೊರಬಂದ ನಂತರ ರಾಜಣ್ಣ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ರಾಜಣ್ಣ ಅವರು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ". ಸೋಮಣ್ಣ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಸೋಮಣ್ಣ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೇಳೆ ರಾಜಣ್ಣ ಸಹಾಯ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದನ್ನು ಇಲ್ಲಿ ಸ್ಮರಿಸಬೇಕಿದೆ. ಆದರೆ ಈ ಭೇಟಿ ಕುರಿತು ಸ್ಪಷ್ಟನೆ ನೀಡಿರುವ ರಾಜಣ್ಣ ಅವರು, ನನ್ನ ಕ್ಷೇತ್ರ ಮಧುಗಿರಿಯ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಮನ" ಪತ್ರ ಸಲ್ಲಿಸಲು ಭೇಟಿ ಮಾಡಿದ್ದೇನೆ" ಎಂದು ಹೇಳಿದ್ದಾರೆ.
ಏತನ್ಮಧ್ಯೆ ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು, ರಾಜಣ್ಣ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಸಾಧಿಸಲು ದೆಹಲಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದಕ್ಕೆ ಪ್ರತಿಕ್ರಿುಸಿದ ರಾಜಣ್ಣ, "ನಾನು ದೊಡ್ಡವರ ಬಗ್ಗೆ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ"
ಎಂದು ತಿರುಗೇಟು ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 