ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಂಣತಿಯರ ಸಾವು ಯಾರು ಹೊಣೆ? ಸೂಕ್ತ ತನಿಖೆ ನಡೆಸಲು ವೆಲ್ಫೇರ್ ಪಾರ್ಟಿ ಆಗ್ರಹ
ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಂಣತಿಯರ ಸಾವು ಯಾರು ಹೊಣೆ? ಸೂಕ್ತ ತನಿಖೆ ನಡೆಸಲು ವೆಲ್ಫೇರ್ ಪಾರ್ಟಿ ಆಗ್ರಹ
ಬೆಂಗಳೂರು 01 ಬಳ್ಳಾರಿ, ಯಾದಗಿರಿ, ರಾಯಚೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆ ಯಾರು ಹೊಣೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಪ್ರಶ್ನಿಸಿ ತನಿಖೆ ನಡೆಸಲು ಒತ್ತಾಯಿಸಿದೆ.ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಜ್ಯ ಸರ್ಕಾರ ಬಾಣಂತಿಯರ ಸಾವು ಮುಂದುವರೆದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎನ್ನುವ ಅನುಮಾನ ಕಾಡುತ್ತಿದೆ.
ಕಳೆದ ವರ್ಷ ಅಂದರೆ 2024 ರಲ್ಲಿ ಬಾಣಂತಿಯರ ಸಾವು ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದು ಬಿಜೆಪಿ ಪಕ್ಷದ ನಾಯಕರು ಇದರ ಬಗ್ಗೆ ಧ್ವನಿ ಎತ್ತಿದ್ದರೂ ಅದನ್ನು ಸಮರ್ಥವಾಗಿ ಖಂಡಿಸಲು ವಿಫಲ ವಾಗಿದೆ.ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ 2024ರ ನ.11ರಿಂದ ಡಿ. 5ರ ನಡುವಿನ ಅಲ್ಪಾವಧಿಯಲ್ಲಿ ಕಳಪೆ ಗುಣಮಟ್ಟದ ಓಷಧ ಸೇವಿಸಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಘಟನೆ ಅತ್ಯಂತ ಗಂಭೀರ ವಿಚಾರ. ಸ್ವತಃ ಮುಖ್ಯ ಮಂತ್ರಿಗಳೇ ಈ ವಿಚಾರವನ್ನು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅವರು ಖುದ್ದಾಗಿ ಭೇಟಿ ನೀಡಿದ್ದಾರೆ.
ಮೃತಪಟ್ಟವರು ಬಾಣಂತಿಯರು ಸೇವಿಸಿದ ಓಷಧಗಳ ಬಗ್ಗೆ ವೈದ್ಯಕೀಯ ತಜ್ಞರ ವಿಶೇಷ ಸಮಿತಿ ಪರೀಕ್ಷೆ ನಡೆಸುತ್ತಿದೆ. ಆಳವಾಗಿ ಪರೀಕ್ಷೆ ನಡೆಸುವುದು ಅಗತ್ಯವಾಗಿದೆ ಎಂದು ಪೀಠ ಈಗಾಗಲೇ ಹೈಕೋರ್ಟ್ ಆದೇಶ ನೀಡಿದ್ದು ಬಾಣಂತಿಯರ ಸಾವಿಗೆ ಯಾರೆ ಕಾರಣರಾದರೂ ಕಠಿಣ ಕ್ರಮ ಕೈಗೊಂಡ ಪಾಠ ಲೋಪದೋಷಕ್ಕೆ ಪಾಠವಾಗಬೇಕಿದೆ ಎಂದರು.ಸಾವೀಗೀಡಾದ ಬಾಣಂತಿಯರ ಕುಟುಂಬಕ್ಕೆ ತಲಾ ?25 ಲಕ್ಷ ಪರಿಹಾರ ನೀಡಬೇಕು. ಓಷಧ ನಿಯಂತ್ರಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಓಷಧ ಪೂರೈಸಿದ ಕಂಪನಿ ಹಾಗೂ ನಿಯಂತ್ರಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.