ಕೊಳಗಿ ಅರಣ್ಯದಲ್ಲಿ ಮಹಿಳೆಯ ಶವ: ಗುರುತು ಪತ್ತೆಗೆ ಪೊಲೀಸರ ತೀವ್ರ ತನಿಖೆ
Woman's body found in Kolagi forest: Police conduct intensive investigation to identify her
ಮುಂಡಗೋಡ 22: ತಾಲೂಕಿನ ಮಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಗಿ ಅರಣ್ಯ ಪ್ರದೇಶದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಶವ ಶುಕ್ರವಾರ ಪತ್ತೆಯಾಗಿ ಆತಂಕ ಮೂಡಿಸಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ರುಂಡ ಪತ್ತೆಗೆ ಶೋಧ ಕಾರ್ಯಾಚರಣೆ ನಡೆದರೂ ಇದುವರೆಗೆ ಸುಳಿವು ಸಿಕ್ಕಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಸ್ಥಳ ಪರೀಶೀಲನೆ ನಡೆಸಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮುಖ್ಯರಸ್ತೆ ಸಮೀಪ ಶವ ಪತ್ತೆಯಾಗಿರುವ ಹಿನ್ನೆಲೆ, ಬೇರೆಡೆ ಹತ್ಯೆ ಮಾಡಿ ಇಲ್ಲಿ ಎಸೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮೃತಳ ಗುರುತು ಪತ್ತೆಗಾಗಿ ಅಕ್ಕಪಕ್ಕದ ಠಾಣೆಗಳಲ್ಲಿ ನಾಪತ್ತೆ ಪ್ರಕರಣಗಳ ಮಾಹಿತಿ ಪರೀಶೀಲಿಸಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 