ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು: ಡಾ. ಪೂನಂ ಪಾಟೀಲ
Women should engage themselves in every field: Dr. Poonam Patil
ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು: ಡಾ. ಪೂನಂ ಪಾಟೀಲ
ಕಾಗವಾಡ: ಇಂದಿನ ಸ್ಮರ್ಧಾತ್ಮಕ ಯುಗದಲ್ಲಿ ಮಹಿಳೆಯರು ಯಾವುದೇ ಆತಂಕವಿಲ್ಲದೇ ಪ್ರತಿಯೊಂದು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡು ಸ್ವಾವಲಂಬಿಗಳಾಬೇಕು. ಸಮಾಜದಲ್ಲಿ ಪುರುಷ-ಮಹಿಳೆ ಎಂಬ ಭೇದ ಭಾವವನ್ನು ಅಳಿಸಿ ಸಮಾಜವನ್ನು ಸಮತೋಲಾಗಿಸಬೇಕೆಂದು ಶೇಡಬಾಳದ ವೈದ್ಯರಾದ ಡಾ. ಪೂನಂ ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ. ಶನಿವಾರ ದಿ. 08 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಡಿ ಶೇಡಬಾಳ ಪಟ್ಟಣದ ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಯ ವಾಣಿಜ್ಯ ಮತ್ತು ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಅವಕಾಶಗಳು ಕಡಿಮೆಯಾಗಿದ್ದವು. ಅವಕಾಶ ಸಿಕ್ಕಾಗ ಅದನ್ನು ಸದುಪಯೋಗ ಪಡಿಸಿಕೊಂಡ ಅನೇಕ ಮಹಿಳೆಯರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಆದರೇ ಇಂದು ಮಹಿಳೆಯರಿಗೆ ಅವಕಾಶಗಳು ಹೆಚ್ಚಾಗಿವೆ. ನಮ್ಮ ದೇಶದ ಪ್ರಮುಖ ಕೇತ್ರಗಳಲ್ಲಿ ಮಹಿಳೆಯರು ಪ್ರಮುಖ ಹುದ್ದೆಗಳನ್ನು ನಿಭಾಯಿಸುತ್ತಿದ್ದಾರೆ ಎಂದರು. ಕಾರ್ಯಕ್ರಮವನ್ನು ಬಿಕಾಂ ವಿದ್ಯಾರ್ಥಿನಿಯರ ಪಾರ್ಥನೆಯೊಂದಿಗೆ ವಿದ್ಯಾದೇವಿ ಸರಸ್ವತಿ ದೇವಿಯ ಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಬಿಎ ವಿದ್ಯಾರ್ಥಿನಿಯರು ಸ್ವಾಗತ ಗೀತೆ ಹಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯ್ನ ಎಸ್.ಆರ್. ಪರುತಗಾಲೆ ವಹಿಸಿದ್ದರು. ಈ ವೇಳೆ ಎ.ಆರ್. ಚೌಗಲೆ ಬಿ.ಡಿ. ಬನಜವಾಡೆ, ಸ್ವಾತಿ ಜತಗೌಡರ ಅಮೃತಾ ಜಾಧವ, ಬಿ.ಎಸ್. ಮಿರಗಿ ಡಿ.ಕೆ. ಮಾಲಗಾಂವೆ ಬಿ.ಎಸ್. ಸೊಕಾರೆ ಸತೀಶ ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 