ಗದಗ ಜಿಲ್ಲಾ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ
ಗದಗ ಜಿಲ್ಲಾ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ
ಗದಗ27: ಸರಕಾರಿ ಮತ್ತು ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನ ವಿದ್ಯಾರ್ಥಿಗಳು ಪಡೆಯುವಂತೆ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಈ ಬಾರಿ 9 ನೇ ಸ್ಥಾನಕ್ಕೆ ತರುವ ಉದ್ದೇಶ ಹೊಂದಿದ್ದು,ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯ ಘಟಕ ಹುಬ್ಬಳ್ಳಿ, ಗದಗ ಜಿಲ್ಲಾ ಘಟಕ ಹಾಗೂ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲಾ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ ನವ್ಹಂಬರ್ 30ರಂದು ನಗರದ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ. ಕೆ ಲಮಾಣಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೈಕ್ಷಣಿಕವಾಗಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನ ಪಡೆಯುವಂತೆ,ತಾಂತ್ರಿಕ ಜ್ಞಾನವನ್ನ ಮಕ್ಕಳಿಗೆ ಒದಗಿಸುವ ಉದ್ದೇಶದಿಂದ ಮಕ್ಕಳ ಏಳ್ಗೆಗಾಗಿ ನಮ್ಮ ಪ್ರಯತ್ನವಾಗಿದ್ದು,ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತ್ರಿವಿಧ ದಾಸೋಹಿ, ಪ. ಪೂ ಶ್ರೀ ಮನ್ನಿರಂಜನ ಜಗದ್ಗುರು ಡಾ: ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಎಡೆಯೂರ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ, ಡಂಬಳ-ಗದಗ, ಅಧ್ಯಕ್ಷತೆಯನ್ನುಬಸವರಾಜ ಹೊರಟ್ಟಿ, ಸಭಾಪತಿಗಳು, ಕರ್ನಾಟಕ ವಿಧಾನ ಪರಿಷತ್ತು, ಕರ್ನಾಟಕ ಸರ್ಕಾರ, ಬೆಂಗಳೂರು ವಹಿಸಿಕೊಳ್ಳಲಿದ್ದಾರೆ ಎಂದರು. ಕಾರ್ಯಗಾರದ ಉದ್ಘಾಟನೆಯನ್ನು ಡಾ: ಎಚ್. ಕೆ. ಪಾಟೀಲ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ ಇವರು ನೆರವೆರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರು ಲೋಕಸಭೆ ಹಾವೇರಿ, ಸಲೀಂ ಅಹ್ಮದ್ ಸರ್ಕಾರಿ ಮುಖ್ಯ ಸಚೇತಕರು, ಹಾಗೂ ಶಾಸಕರು ವಿಧಾನ ಪರಿಷತ್ತು ಜಿ. ಎಸ್. ಪಾಟೀಲ ಅಧ್ಯಕ್ಷರು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಹಾಗೂ ಶಾಸಕರು, ವಿಧಾನ ಸಭೆ ರೋಣ, ಸಿ. ಸಿ. ಪಾಟೀಲ ಶಾಸಕರು, ವಿಧಾನ ಸಭೆ ನರಗುಂದ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಪೋಲೀಸ್ ವರಿಷ್ಠಾಧಿಕಾರಿ ಬಿ. ಎಸ್ ನೇಮಗೌಡ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಮಾಧ್ಯಮಿಕ ಶಾಲಾ ಸಂಘಟನೆ ಮಕ್ಕಳ ಹಿತಕ್ಕಾಗಿ 1976ರಲ್ಲಿ ಹುಟ್ಟಿಕೊಂಡಿದೆ. ಬಸವರಾಜ ಹೊರಟ್ಟಿಯವರ ಮುಂದಾಳತ್ವದಲ್ಲಿ ಅನೇಕ ಹೋರಾಟ ಮಾಡಿಕೊಂಡು ಬರಲಾಗಿದ್ದು, ಅದಕ್ಕೆ ಪೂರಕವಾಗಿ ನಮಗೆ ಸ್ಫಂದನೆ ದೊರೆತಿದೆ. ಇಂತಹ ಮಹತ್ವಪೂರ್ಣ ಘಟ್ಟದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಕಡಿಮೆ ಫಲಿತಾಂಶ ಬರುತ್ತಿರುವುದು ಬೇಸರದ ಸಂಗತಿಯಾಗಿದ್ದು, ಫಲಿತಾಂಶ ಸುಧಾರಿಸಲು ಜಿಲ್ಲಾಧಿಕಾರಿ, ಎಸ್ ಪಿ ನೇತೃತ್ವದಲ್ಲಿ ಸಭೆ ನಡೆಸಿ ಕಾರ್ಯಗಾರ ಹಾಗೂ ಶೈಕ್ಷಣಿಕ ಸಮಾವೇಶ ನಡೆಸಲು ತಿರ್ಮಾನಿಸಲಾಗಿದೆ. ಈ ದೀಶೆಯಲ್ಲಿ ನವ್ಹಂಬರ್ 30ರಂದು ಶನಿವಾರ ಕಾರ್ಯಗಾರ ಹಾಗೂ ಶೈಕ್ಷಣಿಕ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಎಸ್ ಪಾಟೀಲ,ಶಹರ ಘಟಕದ ಅಧ್ಯಕ್ಷ ಬಿ. ಕೆ ನಿಂಬನಗೌಡ್ರ, ಜಿಲ್ಲಾ ಉಪಾಧ್ಯಕ್ಷ ಭೂದಪ್ಪ ಅಂಗಡಿ, ರೋಣ ತಾಲ್ಲೂಕ ಅಧ್ಯಕ್ಷ ಬಿ. ಸಿ ಗುಳೇದ, ಗ್ರಾಮೀಣ ಘಟಕದ ಕಾರ್ಯದರ್ಶಿ ಗೀರೀಶ್ ನರಗುಂದ, ಐ ಎಂ ಗುಳೇದ,ಆರ್ ವಿ ಗೊಂಡಬಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.