ದಿ.21 ರಂದು ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಅವಕಾಶಗಳು ಕಾರ್ಯಾಗಾರ

Workshop on Higher Education Opportunities in the Media Sector

ವಿಜಯಪುರ 20: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಕೋರ್ಸುಗಳ ವಿಭಾಗ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ‘ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಅವಕಾಶಗಳು’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಇದೇ ದಿ.21 ರಂದು ಮಧ್ಯಾಹ್ನ 12:00 ಗಂಟೆಗೆ ಮಹಿಳಾ ವಿವಿಯ ಕನ್ನಡ ಸಭಾಭವನದಲ್ಲಿ ಆಯೋಜಿಸಲಾಗಿದೆ.  

ಕಾರ್ಯಾಗಾರವನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸ್ನಾತಕ ಕೋರ್ಸ ವಿಭಾಗಗಳ ವಿಶೇಷ ಅಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್‌.ಎಂ.ಚಂದ್ರಶೇಖರ್ ಭಾಗವಹಿಸಲಿದ್ದು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.  

ಕಾರ್ಯಾಗಾರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ  ಭಾಗವಹಿಸಲಿದ್ದು,  ಬೋಧಕ ಬೋದಕೇತರ ಸಿಬ್ಬಂದಿವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಸ್ನಾತಕ ಕೋರ್ಸುಗಳ ಸಂಯೋಜಕಿ ಡಾ.ಜಿ.ಸೌಭಾಗ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.