ವಿಶ್ವ ಪರಿಸರ ದಿನಾಚರಣೆ: ಸಸಿ ನೆಟ್ಟು ಹಸಿರು ಭವಿಷ್ಯಕ್ಕೆ ಸಂಕಲ್ಪ
World Environment Day: Plant saplings and pledge for a green future
ಲೋಕದರ್ಶನ ವರದಿ
ಮುಂಡಗೋಡ 06 : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಂಡಗೋಡ ಕೋರ್ಟ. ಆವರಣದಲ್ಲಿ ಮತ್ತು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಶಾಲಾ ಆಡಳಿತದ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟರು. ಪರಿಸರದ ಸಮತೋಲನ ಕಾಪಾಡುವಲ್ಲಿ ಮರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಕರೆ ನೀಡಿದರು. ಹಸಿರು ಪರಿಸರ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕೆಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 