ಪಟ್ಟಣದ ಸಾರಿಗೆ ವಿಭಾಗೀಯ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at the town's transport divisional unit
ಪಟ್ಟಣದ ಸಾರಿಗೆ ವಿಭಾಗೀಯ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ
ಬ್ಯಾಡಗಿ 09: ಪರಿಸರ ಸಂರಕ್ಷ ಣೆ ಮತ್ತು ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಾಮೂಹಿಕ ಜವಾಬ್ದಾರಿ ಪ್ರದರ್ಶಿಸಬೇಕಿದೆ ಎಂದು ವಿಭಾಗೀಯ ಅಧಿಕಾರಿ ಅಶೋಕ್ ಪಾಟೀಲ ಹೇಳಿದರು. ಪಟ್ಟಣದ ಸಾರಿಗೆ ವಿಭಾಗೀಯ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಮಾತನಾಡಿದವರು ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ. ಪರಿಸರದ ಸೌಂದರ್ಯವೂ ಹೆಚ್ಚಾಗಲಿದೆ. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು’ ಎಂದು ಸಲಹೆ ನೀಡಿದರು.ಈ ವೇಳ ಘಟಕ ವ್ಯವಸ್ಥಾಪಕರು ಜಿ ಬಿ ಅಡರಕಟ್ಟಿ ಮಾತನಾಡಿ ಪರಿಸರ ಉತ್ತಮವಾಗಿದ್ದರೆ ಆರೋಗ್ಯಕರ ಜೀವನ ಸಾಗಿಸಬಹುದು. ಪ್ರಾಣಿ, ಪಕ್ಷಿಗಳು ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯೆಗಳಿಗಾಗಿ ಪರಿಸರ ಅವಲಂಬಿಸಿದೆ. ಪ್ಲಾಸ್ಟಿಕ್ ಮಾಲಿನ್ಯ ದೂರವಾಗಿಸಿ ಪರಿಸರವನ್ನು ರಕ್ಷಿಸಬೇಕು ಎಂದರು.ಈ ಸಂದರ್ಭದಲ್ಲಿ ತಾಂತ್ರಿಕ ವಿಭಾಗದ ಸಿಬ್ಬಂದಿಗಳು ಚಾಲಕರು ಹಾಗೂ ನಿರ್ವಾಹಕರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 