ಮಧ್ಯವರ್ಜನ ಶಿಬಿರದಲ್ಲಿ ಯೋಗ ತರಬೇತಿ
ಲೋಕದರ್ಶನ ವರದಿ
ಶಿಗ್ಗಾವಿ 12: ಪಟ್ಟಣದ ಸವಣೂರ ರಸ್ತೆಯಲ್ಲಿರುವ ಸಿಎಂ ಬೊಮ್ಮಾಯಿ ಅವರ ನಿವಾಸದ ಸಭಾಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಹಮ್ಮಿಕೊಂಡ ಮಧ್ಯವರ್ಜನ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಯೋಗ ತರಬೇತಿಯನ್ನು ಹಮ್ಮಿಕೊಂಡಿದ್ದು ಪ್ರತಿನಿತ್ಯ ಬೆಳಿಗ್ಗೆ ಯೋಗ ಶಿಕ್ಷಕ ಕುಬೇರಪ್ಪ ಬಂಡಿವಡ್ಡರ ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡುತ್ತಿದ್ದು ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಆಯೋಜಕರು ಶಿಬಿರಾರ್ಥಿಗಳು ಉಪಸ್ಥಿತರಿದ್ದರು