ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯರಾಗಬೇಕು : ದುಂಡಿಗೌಡ್ರ
Youth should become active in religious activities: Dundigowdra
ಶಿಗ್ಗಾವಿ 03: ಧರ್ಮ ಪಾಲನೆಯಿಂದ ಸುಖಶಾಂತಿ ನೆಮ್ಮದಿ ಸಾಧ್ಯ ಎಂದು ಭರತ್ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ಜರುಗಿದ ಶ್ರೀ ಗ್ರಾಮದೇವಿ ನೂತನ ದೇವಸ್ಥಾನದ ಕಳಸಾರೋಹಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧಾರ್ಮಿಕತೆಗೆ ಜಗತ್ತಿನಲ್ಲಿ ಖ್ಯಾತಿ ಪಡೆದಿರುವ ದೇಶ ಭಾರತ ಆ ನಿಟ್ಟಿನಲ್ಲಿ ದೇವಸ್ಥಾನಗಳ ಜಿರ್ಣೋದ್ದಾರ ಮಾಡುವ ಮೂಲಕ ಧಾರ್ಮಿಕತೆಯನ್ನು ಹೆಚ್ಚಿನ ರೀತಿಯಲ್ಲಿ ಉಳಿಸಿಕೊಂಡು ಹೋಗುವ ಕೆಲಸವಾಗುತ್ತಿವೆ ಎಂದರು. ಇಂದಿನ ದಿನಮಾನಗಳಲ್ಲಿ ತಂದೆ ತಾಯಿಗಳ ಅನುಕರಣೆಯಿಂದ ಮನೆಯಲ್ಲಿರುವ ಮಕ್ಕಳು ಕೂಡಾ ದಾರ್ಮಿಕತೆಯನ್ನು ಆಚರಿಸಿ ತಮ್ಮ ಬದುಕನ್ನು ಸಾರ್ಥಕಗೊಳಿಸುವ ಮೂಲಕ ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯವಾಗಬೆಕೆಂದರು ಹೇಳಿದರು. ಈ ಸಂದರ್ಭದಲ್ಲಿ ಕೆ.ಎಮ್.ಎಫ್ ನಿರ್ದೇಶಕ ತಿಪ್ಪಣ್ಣ ಸಾತಣ್ಣನವರ, ಗ್ರಾಮ ಪಂಚಾಯತಿ ಅದ್ಯಕ್ಷೆ ಲಕ್ಷ್ಮವ್ವ ತಳವಾರ, ಉಪಾದ್ಯಕ್ಷ ನಾಗರಾಜ ಮೂಲಿಮನಿ, ದೇವಸ್ಥಾನದ ಕಮೀಟಿ ಪಧಾದಿಕಾರಿಗಳು, ಗ್ರಾ.ಪಂ ಸರ್ವ ಸದಸ್ಯರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 