ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು
ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು
ಧಾರವಾಡ 26: ರಕ್ತದಾನ ಎಂಬುದು ಶ್ರೇಷ್ಟವಾದ ದಾನ. ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಎಂ ಎಂ ಹಿರೇಮಠ್ ಹೇಳಿದರು. ಕೆ.ಇ ಬೋರ್ಡಿನ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಕ್ತ ನಿಧಿ ಕೇಂದ್ರ ಹಾಗೂ ಎನ್‌ಎಸ್‌ಎಸ್ ಘಟಕ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿ, ರಕ್ತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜು ಪ್ರಾಚಾರ್ಯ ಎಂ ಸಿದ್ಧಾಂತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವಿತಾವಧಿಯಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮಹಾವಿದ್ಯಾಲಯದ ಒಟ್ಟು 25 ವಿದ್ಯಾರ್ಥಿಗಳು ರಕ್ತದಾನ ಮಾಡಿ ಮುಖ್ಯ ಅತಿಥಿಗಳಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಪ್ರೊ. ಈಶ್ವರರಾವ್ ಕರಾತ್ ,ಪ್ರೊ. ಶಿವು ಗಾಣಿಗೇರ್ ಸುನಿತ್ ಪುರೋಹಿತ್ ಹಾಗೂ ಅಂಗ ಸಂಸ್ಥೆಗಳ ಅಧ್ಯಾಪಕರು ಉಪಸ್ಥಿತರಿದ್ದರು.
.ಪೋಟೋ ಅಡಿಬರಹ ಮಹಾವಿದ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರಿ್ಡಸಲಾಗಿತ್ತು.