ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ 3 ಸಾವಿರ ಕೋಟಿ ರೂ: ಸಿಎಂ
ಬಳ್ಳಾರಿ 3: ಕಲ್ಯಾಣ ಕರ್ನಾಟಕಕ್ಕೆ ಅಭಿವೃದ್ದಿಗೆ 3ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುತ್ತೇವೆ. ಪ್ರಸ್ತುತ ನೀಡುತ್ತಿರುವ 1500 ಕೋಟಿ ರೂ. ಅನುದಾನದ ಬದಲಿಗೆ, 3000 ಕೋಟಿ ಅನುದಾನ ನೀಡಲು ಬದ್ಧರಿದ್ದೇವೆ ಎಂದು ಹೇಳಿದರು.
ಅ.30ರಂದು ಸಿಂಧಗಿ ದಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ. ಅಭ್ಯರ್ಥಿಗಳ ಆಯ್ಕೆಯ ಕುರಿತಂತೆ, ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ ಹೆಸರನ್ನು ಆಯ್ಕೆ ಮಾಡಿ, ಕೇಂದ್ರೀಯ ಚುನಾವಣಾ ಸಮಿತಿಗೆ ಕಳಿಸುತ್ತೇವೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲಿದೆ ಎಂದು ಸಿಎಂ ಹೇಳಿದರು.