ಚಿತ್ರರಂಗಕ್ಕೆ ಅನುದಾನ ನೀಡುವಂತೆ ಸಿಎಂಗೆ ಮನವಿ: ಜೈರಾಜ್

ಬೆಂಗಳೂರು,  ಮೇ 29, ಸಿನಿಮಾ ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ,  ಥಿಯೇಟರ್   ಆರಂಭಿಸುವಂತೆ ಸೇರಿ ಚಿತ್ರರಂಗಕ್ಕೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್  ತಿಳಿಸಿದ್ದಾರೆ.ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಗಳಿಗೆ ಬೇಟಿಯಾದ ಬಳಿಕ ಪ್ರತಿಕ್ರಿಯಿಸಿದ ಅವರು,ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಿ ಥಿಯೇಟರ್‌ಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ  ಭರವಸೆ ನೀಡಿದ್ದಾರೆ ಎಂದರು.ಜೂನ್ ಒಂದರಿಂದ ಎಲ್ಲಾ ರೀತಿಯ ಚಟುವಟಿಕೆಗಳು ಆರಂಭವಾಗಲಿವೆ. ಹೀಗಾಗಿ ನಮಗೂ ಅವಕಾಶ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗಿದೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಮಾರ್ಗದರ್ಶನದಂತೆ ಕೆಲಸಕಾರ್ಯ ಆರಂಭಿಸುತ್ತೇವೆ  ಎಂದು ತಿಳಿಸಿದರು.ಅಲ್ಲದೇ, ಚಿತ್ರರಂಗಕ್ಕೂ ನೆರವು ನೀಡುವಂತೆ ಸಿಎಂ ಅವರಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.