ಕೊಪ್ಪಳ: ಮತದಾನ ಜಾಗೃತಿ ಅಭಿಯಾನಕ್ಕೆ ಸಂಜೀವ ಕುಲಕರ್ಣಿ ಅವರಿಂದ ಚಾಲನೆ

ಕೊಪ್ಪಳ 20: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕೊಪ್ಪಳ ನಗರಾದ್ಯಂತ ಮಂಗಳವಾರದಂದು ಆಯೋಜಿಸಲಾದ ಬೃಹತ್ ಮತದಾನ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕಣರ್ಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನಿಡಿದರು.  

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಕರ್ಾರಿ ಇಲಾಖೆಗಳು ಮತ್ತು ಶಾಲಾ ಕಾಲೇಜು ಸಂಸ್ಥೆಗಳು ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ನ್ಯಾಯಾಲಯ ಆವರಣದಿಂದ ನಗರದ ಅಶೋಕ ವೃತ್ತದವರೆಗೆ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.  

ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಆರ್.ಎಸ್. ಪೆದ್ದಪ್ಪಯ್ಯ ಅವರು ಮಾತನಾಡಿ, ಪ್ರಜಾಪ್ರಭುತ್ವ ಬಲಗೊಳ್ಳಲು ಮತ ಪ್ರಮಾಣ ಹೆಚ್ಚಬೇಕು. ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಏಪ್ರಿಲ್ 23 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜರುಗುವ ಮತದಾನದಲ್ಲಿ ಎಲ್ಲ ಅರ್ಹ ಮತದಾರರು ತಪ್ಪದೇ ಭಾಗವಹಿಸಿ ಎಲ್ಲರೂ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕೆನ್ನುವುದು ಚುನಾವಣಾ ಆಯೋಗದ ಆಶಯವಾಗಿದೆ.  ಇದಕ್ಕಾಗಿಯೇ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿಯ ಮೂಲಕ ಹಲವಾರು ಮತದಾರರ ಜಾಗೃತಿಯ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದ್ದು, ಮಾನವ ಸರಪಳಿ, ಬೈಕ್ ರ್ಯಾಲಿ, ಪ್ರತಿಜ್ಞಾವಿಧಿ ಸ್ವೀಕಾರ, ಜಿಲ್ಲಾ ಐಕಾನ್ರಿಂದ ಮತ ಜಾಗೃತಿ ಕಾರ್ಯಕ್ರ, ಮತಯಂತ್ರಗಳ ಪ್ರಾತ್ಯಾಕ್ಷಿತೆ ಹೀಗೆ ಹಲವು ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.  ಈ ನಿಟ್ಟಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದೊಂದಿಗೆ ವಿವಿಧ ಇಲಾಖೆಗಳ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ಇಂದು ಬೃಹತ್ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  ನಮ್ಮ ಮತ ನಮ್ಮ ಹಕ್ಕು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬುವುದೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಆಶವಾಗಿದ್ದು, ನಮ್ಮೊಂದಿಗೆ ಎಲ್ಲಾ ಇಲಾಖೆಗಳು, ವಿವಿಧ ಸಂಘ ಸಂಸ್ಥೆಗಳು ಸಹಕರಿಸುತ್ತಿವೆ.  ನಮ್ಮನ್ನು ಪ್ರತಿನಿಧಿಸುವ ಜನ ಪ್ರತಿನಿಧಿಯನ್ನು ಎಲ್ಲರೂ ಸೇರಿ ಆರಿಸಿದಾಗಲೇ ಪ್ರಜಾಪ್ರಭುತ್ವಕ್ಕೆ ಅರ್ಥ ಬರಲು ಸಾಧ್ಯ.  ಆದ್ದರಿಂದ ಜಿಲ್ಲೆಯ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಎಲ್ಲಾ ಮತದಾರರು ಸಂವಿಧಾನಬದ್ಧವಾಗಿ ತಮಗೆ ದೊರೆತಿರುವ ಮತದಾನ ಹಕ್ಕನ್ನು ಚಲಾಯಿಸಿ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ಈರಣ್ಣ ಪಂಚಾಳ್, ಸಕರ್ಾರಿ ವಕೀಲ ಆಸೀಪ್ ಅಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರು ಹಾಗೂ ವಿವಿಧ ಶಾಲಾ, ಕಾಲೇಜುಗಳ ವಿದ್ಯಾಥರ್ಿಗಳು ಮತದಾನ ಜಾಗೃತಿ ಅಭಿಯಾನದಲ್ಲಿ ಉಪಸ್ಥಿತರಿದ್ದು, ನಮ್ಮ ಮತ ನಮ್ಮ ಹಕ್ಕು, ನಮ್ಮ ನಡೆ ಮತಗಟ್ಟೆ ಕಡೆ, ಮತ ಚಲಾಯಿಸಿ ಪ್ರಜಾಪ್ರಭುತ್ವ ಬಲಗೊಳಿಸಿ, ಪ್ರಜಾಪ್ರಭುತ್ವ ನಮ್ಮಿಂದ ಮತದಾನ ನೀಡಿ ಹೆಮ್ಮೆಯಿಂದ, ಎಲ್ಲರೂ ಕಡ್ಡಾಯವಾಗಿ ಏಪ್ರಿಲ್. 23 ರಂದು ಮತದಾನ ಮಾಡಿ, ಮೈ ವೋಟ್ ಮೈ ರೈಟ್ಸ್ ಹಾಗೂ ಇನ್ನೂ ಅನೇಕ ಘೋಷ ವಾಕ್ಯಗಳನ್ನು ಕೈಯಲ್ಲಿ ಹಿಡಿದು ಎಲ್ಲಾ ಸಾರ್ವಜನಿಕರಿಗೆ ಮತದಾನ ಬಗ್ಗೆ ಅರಿವು ಮೂಡಿಸಿದರು.  ಅಭಿಯಾನವು ಜಿಲ್ಲಾ ನ್ಯಾಯಾಲಯ ಆವರಣದಿಂದ ಪ್ರಾರಂಭಗೊಂಡು ನಗರದ ಅಶೋಕ ವೃತ್ತದವರೆಗೆ ನಡೆಯಿತು.  ಅಶೋಕ ವೃತ್ತದಲ್ಲಿ ಮಾನವ ಸರಪಳಿ ನಿಮರ್ಿಸಿ ಮತದಾನ ಅರಿವು ಮೂಡಿಸಲಾಯಿತು.