ಬ್ಯಾಡ್ಗಿ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಭೂಮಿಪೂಜೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಭೂಮಿಪೂಜೆ

ಬ್ಯಾಡಗಿ: ಪಟ್ಟಣ ಸೇರಿದಂತೆ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅಪಪ್ರಚಾರ ಮಾಡುವ ವಿರೋಧ ಪಕ್ಷದ ಮುಖಂಡರ ಮನೆ ಬಾಗಿಲಿಗೆ ಕರಪತ್ರ ವಿತರಿಸಲು ಸಿದ್ದನಾಗಿದ್ದು, ಕರಪತ್ರದಲ್ಲಿನ ಅಂಕಿ ಅಂಶಗಳ ಮಾಹಿತಿ ಸುಳ್ಳು ಎಂದಾದರೆ ಬಹಿರಂಗವಾಗಿ ಚಚರ್ೆಗೆ ಆಹ್ವಾನಿಸುವೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಸವಾಲು ಹಾಕಿದರು.

ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ 15ಕೋಟಿ ರೂಗಳ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಬ್ಯಾಡಗಿ- ಕದರಮಂಡಲಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ 1800ಕೋಟಿ ರೂಗಳಿಗೂ ಹೆಚ್ಚು ಅನುದಾನವನ್ನು ತಂದಿರುವ ತಾವು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿದ್ದೇವೆ. ಆದರೆ ತಮ್ಮ ಅಭಿವೃದ್ಧಿಯನ್ನು ಸಹಿಸದ ಕೆಲವರು ತೇಜೋವದೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಕುಗ್ಗುವ ಜಾಯಮಾನದವರಲ್ಲ. 

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದ ಜನತೆ ವಿರೋಧಿಗಳಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.ತಾವು ಕಳೆದ 2018ರಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಅಧಿಕಾರದಲ್ಲಿದ್ದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ಕೇವಲ 21ಕೋಟಿ ಅನುದಾನವನ್ನು ಮಾತ್ರ ಪಡೆದಿದ್ದೇವೆ. ಆ ಸಂದರ್ಭದಲ್ಲಿ ಅಭಿವೃಧ್ದಿ ಕಾರ್ಯಗಳಿಗೆ ಅನುದಾನದ ಕೊರತೆಯಿಂದ ಪರದಾಡುವಂತಾಗಿತ್ತು. 2019ರಲ್ಲಿ ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕ್ಷೇತ್ರಕ್ಕೆ ಅನುದಾನದ ಹೊಳೆಯೇ ಹರಿದಿದ್ದು, 1800 ಕೋಟಿಯಷ್ಟು ಅನುದಾನ ಪಡೆದು ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿರುವೆ ಎಂದು ತಿಳಿಸಿದರಲ್ಲದೇ, ಬ್ಯಾಡಗಿ ಪುರಸಭೆಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃಧ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ 51.5ಕೋಟಿ ರೂಗಳ ಅನುದಾನವನ್ನು ಒದಗಿಸಿದ್ದು, ಈಗಾಗಲೇ ಕಾಮಗಾರಿಗಳು ಪ್ರಗತಿಯಲ್ಲಿವೆ. ಎಲ್ಲ ಕಾಮಗಾರಿಗಳನ್ನು ಎರಡು ತಿಂಗಳೊಳಗೆ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಿರುವೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪುರಸಭೆಗೆ ನೂತನವಾಗಿ ನಾಮನಿದರ್ೆಶಿತ ಸದಸ್ಯರಾಗಿ ನೇಮಕಗೊಂಡಿರುವ ಸಂತೋಷ ಮೂಲಿಮನಿ, ಪ್ರಭು ಹರ್ಲಿಪೂರ, ಶೈಲಾ ಅಕ್ಕಿ, ಅಪ್ಪಣ್ಣ ಬಾಗಲಕೋಟೆ ಹಾಗೂ ಭರಮಣ್ಣ ಗಾಜೇರ ಅವರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಪಟ್ಟಣದ ಸುಭಾಸ ಆಟೋ ಮಾಲೀಕರ ಮತ್ತು ಚಾಲಕರ ಸಂಘದವರು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಆಟೋ ನಿಲ್ದಾಣಕ್ಕೆ ಮೇಲ್ಛಾವಣಿ, ದಿ. ಪುನೀತ್ ರಾಜಕುಮಾರ್ ಅವರ ಪುತ್ಥಳಿ ಸ್ಥಾಪನೆ ಹಾಗೂ ರೈಲ್ವೆ ನಿಲ್ದಾಣದಲ್ಲಿ ಆಟೋ ನಿಲ್ದಾಣ ಮಾಡಬೇಕೆಂದು ಒತ್ತಾಯಿಸಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರಿಗೆ ಮನವಿ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷೆ ಫಕ್ಕೀರಮ್ಮ ಚಲುವಾದಿ, ಉಪಾಧ್ಯಕ್ಷೆ ಮಲ್ಲಮ್ಮ ಪಾಟೀಲ, ಸದಸ್ಯರಾದ ಚಂದ್ರಣ್ಣ ಶೆಟ್ಟರ, ಗಾಯತ್ರಿ ನಾಯ್ಕರ, ಕವಿತಾ ಸೊಪ್ಪಿನಮಠ, ಹನುಮಂತಪ್ಪ ಮ್ಯಾಗೇರಿ, ಶಿವರಾಜ ಅಂಗಡಿ, ಬಿಜೆಪಿ ತಾಲೂಕಾಧ್ಯಕ್ಷ ಹಾಲೇಶ ಜಾಧವ, ಮುಖಂಡರಾದ ಶೇಖರಗೌಡ ಗೌಡ್ರ, ಸುರೇಶ ಯತ್ನಳ್ಳಿ, ವಿರೇಂದ್ರ ಶೆಟ್ಟರ, ಸುರೇಶ ಉದ್ಯೋಗಣ್ಣನವರ, ಪುರಸಭಾ ಮುಖ್ಯಾಧಿಕಾರಿ ಏಸು ಬೆಂಗಳೂರು, ಇಂಜನೀಯರ್ ಕೆ.ರಾಜಪ್ಪ, ಗುತ್ತಿಗೆದಾರ ಎಸ್.ಆರ್.ಬಳ್ಳಾರಿ, ನಾಗರಾಜ ಇಟಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು 

ಸುದ್ದಿ ಓದಿ