ಹಿರೇಕೋಡಿ ಗ್ರಾಮಕ್ಕೆ 1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನ
ಲೋಕದರ್ಶನ ವರದಿ
ಚಿಕ್ಕೋಡಿ 23: ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ?1.25 ಕೋಟಿ ಅನುದಾನ ಮಂಜೂರಾಗಿದ್ದು, ಕಾಮಗಾರಿಗಳಿಗೆ ಶಾಸಕರಾದ ಗಣೇಶ್ ಹುಕ್ಕೇರಿ ಚಾಲನೆ ನೀಡಿದರು.ಗ್ರಾಮದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ರಸ್ತೆ ಹಾಗೂ ಚರಂಡಿ ನಿರ್ಮಾಣ, ದೇವಸ್ಥಾನ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ವಿಶೇಷ ಅನುದಾನದಡಿ ಮೂರು ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ.ಮೊದಲನೆಯದಾಗಿ, ಗ್ರಾಮದಲ್ಲಿನ ವಿವಿಧ ಕಾಲೋನಿಗಳಿಂದ ಮುಖ್ಯ ರಸ್ತೆಯವರೆಗೆ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ?50 ಲಕ್ಷ ಮಂಜೂರಾಗಿದೆ.
ಗ್ರಾಮ ಪಂಚಾಯಿತಿಯಿಂದ ಮಹಾಲಿಂಗರಾಯ ದೇವಸ್ಥಾನದವರೆಗೆ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ?50 ಲಕ್ಷ ಅನುದಾನ ನೀಡಲಾಗಿದೆ. ಶ್ರೀ ಹನುಮಾನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ?25 ಲಕ್ಷ ಮೀಸಲಿರಿಸಲಾಗಿದೆ ಎಂದರು. ಗ್ರಾಮಾಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದಲ್ಲದೆ, ಹಿರೇಕೋಡಿ ಗ್ರಾಮದಲ್ಲಿ ಈಗಾಗಲೇ ಶಿಕ್ಷಣ ಹಾಗೂ ವಸತಿ ಸಂಬಂಧಿತ ದೊಡ್ಡ ಮಟ್ಟದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸುಮಾರು ?26.85 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಶೀಘ್ರದಲ್ಲೇ ಅವುಗಳನ್ನು ಸಾರ್ವಜನಿಕ ಬಳಕೆಗೆ ನೀಡಲಾಗುವುದು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.