ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,290 ಮಂದಿ ಕೊರೊನಾದಿಂದ ಸಾವು
ನವದೆಹಲಿ, ಸೆಪ್ಟೆಂಬರ್ 16: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90,123 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದರಿಂದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 5,0 2,359ಕ್ಕೆ ಏರಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ದೇಶದಲ್ಲಿ ವೈದ್ಯರ ನಿಗಾದಲ್ಲಿರುವ ಸೋಂಕಿತರ ಸಂಖ್ಯೆ ಒಂದು ದಶ ಲಕ್ಷ ತಲುಪಿದೆ. ಪ್ರಸ್ತುತ 9 ಲಕ್ಷದ 95, 933 ಸಕ್ರಿಯ ಪ್ರಕರಣಗಳಿವೆ. ಈವರೆಗೆ ನಾಲ್ಕು ದಶ ಲಕ್ಷ ಕೋವಿಡ್ ಸೋಂಕಿತರು( 39,42,360) ಚೇತರಿಸಿಕೊಂಡು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಹೊಂದಿದ್ದಾರೆ.
ಕಳೆದ 24 ಗಂಟೆಗಳಲ್ಲಿ 1,290 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಇದರಿಂದ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 82,066ಕ್ಕೆತಲುಪಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.