ಬಳ್ಳಾರಿ

10,422 ಅಭ್ಯರ್ಥಿಗಳು ಭಾಗಿ; ಹೊರಗಿನ ಅಭ್ಯರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ

10,422 ಅಭ್ಯರ್ಥಿಗಳು ಭಾಗಿ; ಹೊರಗಿನ ಅಭ್ಯರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ


ಬಳ್ಳಾರಿ, ಅ.9 ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಅ.11ರಂದು ಭಾನುವಾರ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.  

ಬಳ್ಳಾರಿ ನಗರದ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪತ್ರಿಕೆ-1 ಮತ್ತು ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ. ಒಟ್ಟು 10,422 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದ್ದಾರೆ.  

ಅಭ್ಯರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ  

ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅ.10ರಂದು ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಪುರುಷ ಅಭ್ಯರ್ಥಿಗಳಿಗೆ ಕೌಲ್ ಬಜಾರ್ನ ರಂಗಮಂದಿರ ರಸ್ತೆಯಲ್ಲಿರುವ ಬಾಬು ಜಗಜೀವನ ರಾಮ್ ಭವನದಲ್ಲಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಕೌಲ್ ಬಜಾರ್ನ ಸ್ಟೇಡಿಯಂ ರಸ್ತೆಯಲ್ಲಿರುವ ವಾಲ್ಮೀಕಿ ಭವನದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.  

ಅಭ್ಯರ್ಥಿಗಳಿಗೆ ಸೂಚನೆಗಳು  

ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಕನಿಷ್ಠ ಎರಡು ಗಂಟೆಗಳ ಮುಂಚಿತವಾಗಿ ಕೇಂದ್ರಕ್ಕೆ ಹಾಜರಾಗಬೇಕು. ಪ್ರವೇಶ ಪತ್ರದೊಂದಿಗೆ ಭಾವಚಿತ್ರವಿರುವ ಆಧಾರ್ ಕಾರ್ಡ್‌ ಅಥವಾ ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು.  


ಸುದ್ದಿ ಓದಿ