ಆಫ್ಘಾನಿಸ್ತಾನದ ಉತ್ತರ ಬಾಲ್ಕ್ ಪ್ರಾಂತ್ಯದಲ್ಲಿ ಸೇನೆಯಿಂದ ವೈಮಾನಿಕ ದಾಳಿ: 10 ತಾಲಿಬಾನ್ ಉಗ್ರರು ಹತ
ಕಾಬೂಲ್, ಜುಲೈ 17 :- ಆಫ್ಘಾನಿಸ್ತಾನದ ಬಾಲ್ಕ್ ಪ್ರಾಂತ್ಯದ ಚಾಮ್ ತಲ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ತಾಲಿಬಾನ್ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ 10 ಉಗ್ರರು ಹತರಾಗಿದ್ದಾರೆ ಎಂದು ಸೇನಾ ವಕ್ತಾರ ಮೊಹಮದ್ ಹನೀಫ್ ರೆಜಾಯ್ ತಿಳಿಸಿದ್ದಾರೆ. ತಾಲಿಬಾನ್ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಯುದ್ಧ ವಿಮಾನಗಳು ನಡೆಸಿದ ದಾಳಿಯಲ್ಲಿ 10 ಉಗ್ರರು ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ವೈಮಾನಿಕ ದಾಳಿಗಳಲ್ಲಿ ಉಗ್ರರ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ನಾಶಪಡಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಾಲ್ಕ್ ಪ್ರಾಂತ್ಯದ ಕೆಲ ಜಿಲ್ಲೆಗಳು ಸೇರಿದಂತೆ ಹೆಚ್ಚಿನ ಪ್ರದೇಶವನ್ನು ವಶಕ್ಕೆ ತೆಗೆದುಕೊಂಡಿರುವ ತಾಲಿಬಾನ್ ಉಗ್ರರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.