ಉತ್ತರಪ್ರದೇಶದಲ್ಲಿ ಅಡುಗೆ ಅನಿಲ ಸ್ಫೋಟ : 10 ಸಾವು
ಮಾಔ, ಅ 14: ಉತ್ತರಪ್ರದೇಶದ ಮೊಹಮದಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ 10 ಮಂದಿ ಮೃತಪಟ್ಟಿದ್ದು 15 ಜನರಿಗೆ ಗಾಯಗಳಾಗಿವೆ. ಸ್ಫೋಟದ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಇತರ ಭದ್ರತಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನೂ ಅನೇಕ ಜನರು ಕುಸಿದ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಅಪಾಯವಿದೆ. ವಾಲ್ದಿಪುರ್ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಎಲ್ ಪಿ ಜಿ ಸ್ಫೋಟಿಸಿದ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಉತ್ತರಪ್ರದೇಶದ ಡಿಜಿಪಿ ಒ.ಪಿ.ಸಿಂಗ್ ತಿಳಿಸಿದ್ದಾರೆ. ಆದ್ಯತೆಯ ಮೇರೆಗೆ ರಕ್ಷಣಾ ಕಾರ್ಯಕೈಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿ, ತಕ್ಷಣವೇ ಎಲ್ಲ ಸಾಧ್ಯ ಪರಿಹಾರ ಮತ್ತು ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 