ಆಕಾಶ ಪ ಪೂ ಮಹಾವಿದ್ಯಾಲಯದ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ
ವಿಜಯನಗರ : 27: ಇತ್ತೀಚಿಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ಆಕಾಶ ಪ ಪೂ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 41 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 8 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಶೇಕಡ 100ಅ ಪ್ರತಿಶತ ಫಲಿತಾಂಶ ತರುವುದರ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.
2022-23 ನೇ ಸಾಲಿನ ದ್ವಿತೀಯ ಪಿ ಯು ಪಲಿತಾಂಶದಲ್ಲಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಕುಮಾರ. ಭರತ್ಕುಮಾರ್ ಚೌದ್ರಿ 575 ಶೇ.95.83, ಕುಮಾರಿ. ಎ. ಫೆಮಿನಾ 565 ಶೇ.94.16 ಮತ್ತು ಕುಮಾರಿ. ಸಿ. ಗೌಸಿಯಾ ಬೇಗಂ 564 ಶೇ.94 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ, ಕುಮಾರಿ. ನಿಕ್ಷಿತಾ ಹೆಚ್. 577 ಶೇ.96.16, ಕುಮಾರಿ. ಎ.ಎಂ.ಕವನಾ 569 ಶೇ.94.83 ಮತ್ತು ಕುಮಾರಿ ಸನಾ ಇರಮ್ 562 ಶೇ.93.67 ಅಂಕ ಪಡೆದು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಹೆಚ್.ಎನ್. ಮಹಮ್ಮದ ಇಮಾಮ್ ನಿಯಾಜಿ ರವರು ಮತ್ತು ಉಪನ್ಯಾಸಕ ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಗಳು ಸೇರಿ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
ಡಿಸ್ಟಿಂಕ್ಷನ್ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿರುವುದು ಸಂತಸ ತಂದಿದೆ, ಜೆ.ಇ.ಇ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಮ್ಮ ಕಾಲೇಜಿನ ಭರತ್ ಕುಮಾರ್ ಚೌಧರಿ ಶೇ. 96.214 ಪರ್ಸೈಂಟೈಲ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ., ಸಿ.ಇ.ಟಿ, ನೀಟ್ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಇದ್ದು ವಿದ್ಯಾರ್ಥಿಗಳು ಇನ್ನೂ ಉತ್ತಮ ಅಂಕಗಳನ್ನು ಪಡೆಯುವ ಭರವಸೆ ಹೆಚ್ಚಿಸಿದ್ದಾರೆ. ಹೊಸಪೇಟೆ ನಗರದಲ್ಲಿ ಪ್ರಥಮ ಬಾರಿಗೆ ಅತೀ ಉತ್ತಮ ಫಲಿತಾಂಶ ಬರಲು ಕಾರಣರಾದ ಉತ್ತಮ ಅನುಭವವುಳ್ಳ ಉಪನ್ಯಾಸಕರಿಗೆ ಹಾಗೂ ಮೂಲ ಸೌಕರ್ಯ ಕಲ್ಪಿಸಿದ ಆಡಳಿತ ಮಂಡಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭಕೋರಿ, ನಮ್ಮ ಕಾಲೇಜ್ ಉತ್ತಮ ಶಿಕ್ಷಣ ಮತ್ತು ತರಬೇತಿಗೆ ಆಕಾಶ್ ಕಾಲೇಜ್ ಹೆಸರಾಗಿದ್ದು, ವಿಧ್ಯಾರ್ಥಿಗಳಲ್ಲಿ ವಿಶ್ವಾಸ ಹೆಚ್ಚಿಸಿದೆ ಎಂದು ಪ್ರಾಚಾರ್ಯರಾದ ಮಹೇಶ್ ಚೌಧರಿ ತಿಳಿಸಿದ್ದಾರೆ.