ರಾಜ್ಯದಲ್ಲಿ 100 ಕೊರೋನಾ ಪ್ರಕರಣಗಳು; ಸೋಂಕಿತರ ಸಂಖ್ಯೆ 2282ಕ್ಕೇರಿಕೆಯಾಗಿದೆ
ಬೆಂಗಳೂರು, ಮೇ 26 ,ರಾಜ್ಯದಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಬರೋಬ್ಬರಿ 100 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2282ಕ್ಕೇರಿಕೆಯಾಗಿದೆ.ಕೋಲಾರದಲ್ಲಿ 2, ಯಾದಗಿರಿ 14, ದಕ್ಷಿಣ ಕನ್ನಡದಲ್ಲಿ 3, ಬಾಗಲಕೋಟೆಯಲ್ಲಿ 1, ವಿಜಯಪುರದಲ್ಲಿ 5, ದಾವಣಗೆರೆಯಲ್ಲಿ 11, ಬೀದರ್ ನಲ್ಲಿ 10, ಹಾಸನ 13, ಉಡುಪಿ 3, ಚಿಕ್ಕಬಳ್ಳಾಪುರದಲ್ಲಿ 1, ಚಿತ್ರದುರ್ಗದಲ್ಲಿ 19, ಕೊಪ್ಫಳದಲ್ಲಿ1, ಬಳ್ಳಾರಿಯಲ್ಲಿ 1, ಬೆಂಗಳೂರು ನಗರ 2, ಬೆಳಗಾವಿ 11 ಪ್ರಕರಣಗಳು ವರದಿಯಾಗಿವೆ.ಇವರಲ್ಲಿ ಬಹುತೇಕರು ಹೊರರಾಜ್ಯಗಳ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು ಮತ್ತು ಜಾರ್ಖಂಡ್ ಪ್ರವಾಸ ಕೈಗೊಂಡ ಹಲವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ 46 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು 722 ಮಂದಿ ಗುಣಮುಖರಾಗಿದ್ದು, ಒಟ್ಟು 1514 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 