ವಾಷಿಂಗ್ಟನ್ ನಿಂದ 105 ಅನಿವಾಸಿ ಭಾರತೀಯರು ಬೆಂಗಳೂರಿಗೆ ಆಗಮನ
ಬೆಂಗಳೂರು, ಮೇ 30,ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಅಮೆರಿಕಾದ(ಯು.ಎಸ್.ಎ.) ವಾಷಿಂಗ್ಟನ್ ನಿಂದ ಶನಿವಾರ ಬೆಳಗ್ಗಿನ ಜಾವ 3.15ಕ್ಕೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಪ್ಪತ್ಮೂರನೇ ಏರ್ ಇಂಡಿಯಾ ವಿಮಾನದಲ್ಲಿ 105 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 105 ಮಂದಿ ಪ್ರಯಾಣಿಕರಲ್ಲಿ ಎರಡು ಮಕ್ಕಳು ಸೇರಿ 54 ಪುರುಷರು ಮತ್ತು 49 ಮಹಿಳೆಯರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 105 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದರು.ಸದ್ಯ 105 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸಿದ ಬಳಿಕ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 