ಕೌಲಾಲಂಪುರ್ ನಿಂದ ಬೆಂಗಳೂರಿಗೆ ಬಂದಿಳಿದ 108 ಪ್ರಯಾಣಿಕರು
ಬೆಂಗಳೂರು, ಮೇ 23,ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಮಲೇಷ್ಯಾದ ಕೌಲಾಲಂಪುರ್ ನಿಂದ ಮೇ 22ರ ರಾತ್ರಿ 9.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೊಂದನೇ ವಿಮಾನದಲ್ಲಿ 108 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 108 ಮಂದಿ ಪ್ರಯಾಣಿಕರಲ್ಲಿ ಒಂದು ಗರ್ಭಿಣಿ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ 80 ಪುರುಷರು ಮತ್ತು 28 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 108 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.
108 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ. ಜಕಾರ್ತದಿಂದ 214 ಪ್ರಯಾಣಿಕರು ಆಗಮನಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಇಂಡೋನೇಷ್ಯಾದ ಜರ್ಕಾತದಿಂದ ಮೇ 23ರ ಬೆಳಗಿನ ಜಾವ 1:40 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೆರಡನೆಯ ವಿಮಾನದಲ್ಲಿ 214 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 214 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ. 214 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 